
ಭುವನೇಶ್ವರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ಸೆಂಚುರಿ ಸ್ಟಾರ್ ಅವರ 131 ನೇ ಚಿತ್ರದ ಶೂಟಿಂಗ್ ಆಗಸ್ಟ್ ನಲ್ಲಿ ಆರಂಭವಾಗಲಿದೆ. ಶಿವಣ್ಣನ ಹುಟ್ಟುಹಬ್ಬದಂದು ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಸಂತಸಗೊಂಡಿದ್ದಾರೆ. ನಿರ್ಮಾಣ ತಂಡವು ಈಗ ಚಿತ್ರದ ಶೂಟಿಂಗ್ ಆರಂಭಿಸಲು ಸಜ್ಜಾಗಿದೆ.
ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಮತ್ತು ಸುಧೀರ್, ಛಾಯಾಗ್ರಾಹಕ ಎಜೆ ಶೆಟ್ಟಿ ಮತ್ತು ಸಂಕಲನಕಾರ ದೀಪು ಎಸ್ ಕುಮಾರ್ ಸೇರಿದಂತೆ ಇಡೀ ತಂಡವು ಶಿವರಾಜಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿದ್ದು, ಆಗಸ್ಟ್‌ನಲ್ಲಿ ಚಿತ್ರೀಕರಣ ಶೂಟಿಂಗ್ ಆರಂಭಿಸಲು ನಿರ್ಧರಿಸಿದೆ. ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಘೋಸ್ಟ್' ಖ್ಯಾತಿಯ ವಿ.ಎಂ.ಪ್ರಸನ್ನ ಹಾಗೂ 'ಸೀತಾರಾಮಂ' ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ.
ವಿಕ್ರಂ ವೇದ, ಆರ್ಡಿಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್. ಸಂಗೀತ ಸಂಯೋಜಿಸಲಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್.ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ಅಡಿ ಎಸ್.ಎನ್.ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.
Advertisement