ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಮುಂದು

ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಶಾಂತಿನಗರದ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದರು. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು.
ಬಿಗ್ ಬಾಸ್ ಕನ್ನಡ ಸೀಸನ್ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿ, ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. 2017ರಲ್ಲಿ ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಶೆಟ್ಟಿ ಅವರು ಪ್ರಪೋಸ್ ಮಾಡಿದ್ದರು. ಬಳಿಕ ಅವರಿಬ್ಬರು 2020 ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಬಳಿಕ ಗಿಚ್ಚಿಗಿಲಿಗಿಲಿ ಸೇರಿದಂತೆ ಹಲವು ಟಿವಿ ರಿಯಾಲಿಟಿ ಶೋಗಳಲ್ಲಿ ಈ ಜೋಡಿ ಕಾಣಿಸಿಕೊಳ್ಳುತಿತ್ತು. ಇನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿರುವ ನಿವೇದಿತಾ ಗೌಡ ಆಗಾಗ ಹೊಸ ಹೊಸ ರೀಲ್ಸ್ ಹಂಚಿಕೊಳ್ಳುತ್ತಾರೆ. ಕೆಲವು ರೀಲ್ಸ್‌ಗಳನ್ನು ನೋಡಿ ನೆಟ್ಟಿಗರು ಗರಂ ಆಗುತ್ತಿದ್ದರು. ಕಮೆಂಟ್ಗಳಲ್ಲಿ ಅನೇಕರು ಚಂದನ್ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಿದ್ದರು. ಮಗು ವಿಚಾರವೇ ಅವರಿಬ್ಬರ ನಡುವಿನ ದಾಂಪತ್ಯ ಜೀವನ ಬಿರುಕುಗೊಳ್ಳಲು ಕಾರಣ ಎಂಬುದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



