
ಬೆಂಗಳೂರು: ಡಿವೋರ್ಸ್ ನೋಟಿಸ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗ ಆರೋಪಗಳು ಹೆಚ್ಚಾಗಿವೆ. ಈಗ ಶ್ರೀದೇವಿ ಭೈರಪ್ಪ ಅವರು ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.
ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ರಾಜ್‌ಕುಮಾರ್ ಪರ ವಕೀಲ ಸಿರಿಲ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ನಟನ ಲೀಗಲ್ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಶ್ರೀದೇವಿ ಅವರು ಯುವಗೆ ಟಾರ್ಚರ್ ಮಾಡಿದ್ದಾರೆ. ರಾಜ್‌ಕುಮಾರ್ ಅಕಾಡೆಮಿಯಿಂದ ಪರ್ಸನಲ್ ಅಕೌಂಟ್ಗೆ 3 ಕೋಟಿ ರೂಪಾಯಿ ಟ್ರಾನ್ಸಫರ್ ಮಾಡಿಕೊಂಡಿದ್ದಾರೆ. ನಿನ್ನನ್ನು ಬೀದಿಗೆ ತರುತ್ತೇನೆ ಎಂದು ಪತಿಗೆ ಬೆದರಿಸಿದ್ದಾರೆ. ಬಳಿಕ ಅಮೆರಿಕಕ್ಕೆ ಬರುವಂತೆ ಒತ್ತಾಯ ಮಾಡಿದ್ದರು. ಬಾಯ್ ಫ್ರೆಂಡ್ ಮೂಲಕ ಮಗು ಪಡೆಯೋ ಆಲೋಚನೆಯಲ್ಲಿ ಅವರಿದ್ದರು. ರಾಧಯ್ಯ ಅನ್ನೋದು ಶ್ರೀದೇವಿ ಬಾಯ್ ಪ್ರೆಂಡ್ ಹೆಸರು’ ಎಂದು ಆರೋಪಿಸಿದ್ದರು.
ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.
ನಾನು ಹಾಗೂ ಯುವ ರಾಜ್‌ಕುಮಾರ್ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್ ಬಗ್ಗೆ ಫೋಕಸ್ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.
ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಶ್ರೀದೇವಿ, ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಂದು ಹೆಣ್ಣಿನ ಚಾರಿತ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ’ ಎಂದು ಬರೆದಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಗಳನ್ನು ಗೌರವಿಸದೆ ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಅವರು.
Advertisement