
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಹಲವು ಜನಪ್ರಿಯ ವ್ಯಕ್ತಿಗಳು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್ ವುಡ್ ರಚಿತಾ ರಾಮ್ ಘಟನೆ ಕುರಿತು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ರಚಿತಾ ರಾಮ್, ಮೊದಲಿಗೆ ಧರ್ಮೋ ರಕ್ಷತಿ ರಕ್ಷಿತಃ ಎಂಬ ಸಾಲು ಬರೆದುಕೊಂಡಿದ್ದಾರೆ.
ನಮಸ್ಕಾರ,
ಈ ನೋಟ್ ನ ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು…!
ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.
ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಬರೆದುಕೊಂಡಿದ್ದಾರೆ.
Advertisement