
ಬೆಂಗಳೂರು: ಸುದೀಪ್ ನಟನೆಯ ಹೆಬ್ಬುಲಿ ಸಿನಿಮಾದಲ್ಲಿ ನಟಿಸಿದ್ದ ನಟಿ ಅಮಲಾ ಪೌಲ್ ಅವರು ಗಂಡುವಿಗೆ ತಾಯಿಯಾಗಿದ್ದಾರೆ.
ಈ ಖುಷಿ ಸುದ್ದಿಯನ್ನು ನಟಿಯೇ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ, ಮಗುವಿನ ಹೆಸರನ್ನು ಕೂಡ ರಿವೀಲ್ ಮಾಡಿದ್ದಾರೆ.
ಜೂನ್ 11ರಂದು ಜನಿಸಿದ ಪವಾಡ’ ಎಂದು ನಟಿ ಅಡಿಬರಹ ನೀಡಿದ್ದು, ಗಂಡು ಮಗುವಿಗೆ ‘ಇಲೈ’ ಎಂದು ಹೆಸರಿಟ್ಟಿದ್ದಾರೆ. ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಗುವನ್ನು ಮನೆಗೆ ಕರೆತರುವ ವೇಳೆ ಅಮಲಾರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಕೊಚ್ಚಿಯಲ್ಲಿ ಉದ್ಯಮಿ ಜಗತ್ ದೇಸಾಯಿ ಜೊತೆ ಅಮಲಾ ಮದುವೆಯಾದರು. ಇತ್ತೀಚೆಗೆ ರಿಲೀಸ್ ಆದ ‘ಆಡುಜೀವಿತಂ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು.
Advertisement