ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ: ಸ್ಯಾಂಡಲ್ ವುಡ್ ಪ್ರತಿಕ್ರಿಯೆ ಹೀಗಿತ್ತು...

ಕೊಲೆ ಪ್ರಕರಣದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೊಳಗಾಗಿದ್ದು, ಈ ಸಂಬಂಧ ಸ್ಯಾಂಡಲ್ ವುಡ್ ನಿಧಾನಗತಿಯಲ್ಲಿ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.
ನಟ ದರ್ಶನ್.
ನಟ ದರ್ಶನ್.

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೊಳಗಾಗಿದ್ದು, ಈ ಸಂಬಂಧ ಸ್ಯಾಂಡಲ್ ವುಡ್ ನಿಧಾನಗತಿಯಲ್ಲಿ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.

ಪ್ರಕರಣ ಸಂಬಂಧ ನಟ ಉಪೇಂದ್ರ, ಕಿಚ್ಚ ಸುದೀಪ್, ನಟಿ ರಮ್ಯಾ, ಬಿಸಿ ಪಾಟೀಲ್ ಸೇರಿದಂತೆ ಹಲವು ನಟ-ನಟಿ, ನಿರ್ಮಾಪಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ನಿನ್ನೆಯಷ್ಟೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಉಪೇಂದ್ರ ಅವರು, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,

ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು.

ನಟ ದರ್ಶನ್.
'ಯಾರೂ ಜನರನ್ನು ಕೊಲ್ಲಲು ಹೋಗುವುದಿಲ್ಲ': ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ; ಪೊಲೀಸರ ಕೆಲಸಕ್ಕೆ ಮೆಚ್ಚುಗೆ

ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಹೇಳಿದ್ದಾರೆ.

ನಟ ಸುದೀಪ್ ಅವರು ಮಾತನಾಡಿ, ಕೊಲೆ ಪ್ರಕರಣ ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ತಂದಿದೆ. ಪೊಲೀಸರು ಹಾಗೂ ಮಾಧ್ಯಮಗಳು ಸತ್ಯವನ್ನು ಬಯಲಿಗೆಳೆಯಲು ಶ್ರಮಿಸುತ್ತಿದ್ದು, ಈ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ.

ನಟ ದರ್ಶನ್.
ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಪಟ್ಟ ವಿಚಾರಣೆ ವಿಡಿಯೋ-ಸಾಕ್ಷಿ ಹಂಚಿಕೊಳ್ಳಿ: ಪೊಲೀಸರಿಗೆ ನಟ ಉಪೇಂದ್ರ ಆಗ್ರಹ

ನಟಿ ಮತ್ತು ರಾಜಕಾರಣಿ ರಮ್ಯಾ (ದಿವ್ಯಾ ಸ್ಪಂದನಾ) ಅವರು ಪ್ರತ್ರಿಯಿಸಿ, ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು. ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ನಟ ದರ್ಶನ್.
ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ, ನ್ಯಾಯ ಸಿಗಲಿ: Darshan ವಿಚಾರವಾಗಿ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ...

ಬಿಸಿ ಪಾಟೀಲ್ ಅವರು ಮಾತನಾಡಿ, ಇದೊಂದು ದುರದೃಷ್ಟಕರ ಸಂಗತಿ. ಜೀವ ತೆಗೆಯುವುದು ಯಾರೂ ಕೂಡ ಕ್ಷಮಿಸಲಾರದ ಹೇಯ ಕೃತ್ಯ. ನಾವು ಏನೇ ಮಾತನಾಡಿದರು ರೇಣುಕಾ ಸ್ವಾಮಿ ಜೀವ ವಾಪಸ್ ಬರುವುದಿಲ್ಲ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂದರೆ ಈ ಕೇಸ್‌ನಲ್ಲಿ ಯಾರೇ ತಪ್ಪಿತಸ್ಥರಾಗಿರಲಿ ಅವರಿಗೆ ಶಿಕ್ಷೆಯಾಗಬೇಕು. ಕಾನೂನಿಗಿಂತ ದೊಡ್ಡವರು ಯಾರೂ ದೊಡ್ಡವರಲ್ಲ. ಕಾನೂನಿನ ಪ್ರಕಾರ ತಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ನಿರ್ಮಾಪಕ ಉಮಾಪತಿಯವರು ಮಾತನಾಡಿ, ಕಾನೂನು ಎಲ್ಲರಿಗೂ ಒಂದೇನೆ. ಅಂಬೇಡ್ಕರ್ ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡೇ ಸಂವಿಧಾನ ರಚನೆ ಮಾಡಿದ್ದರು. ಈ ಕಾರಣಕ್ಕೆ ಎಲ್ಲರಿಗೂ ಒಂದೇ ನ್ಯಾಯ ಎಂದಿದ್ದಾರೆ. "ಒಂದು ತಲೆಯಲ್ಲಿ ಇಟ್ಕೊಳ್ಳಿ, ಮಾರುತಿ ಕಾರಲ್ಲಿ ಹೋಗುವವನಿಗೆ ಒಂದು ನ್ಯಾಯ. ಲ್ಯಾಂಬೊರ್ಗಿನಿಯಲ್ಲಿ ಹೋಗುವವನಿಗೆ ಒಂದು ನ್ಯಾಯ ಅಂತ ಯಾವತ್ತೂ ಇರಬಾರದು ಎಂದು ಹೇಳಿದ್ದಾರೆ.

ನಟ ದರ್ಶನ್.
ತಪ್ಪು ಯಾರೇ ಮಾಡಿದ್ರು ತಪ್ಪೇ; ಲ್ಯಾಂಬೋರ್ಗಿನಿ ತಗೊಳ್ಳೋಕೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ ಶ್ರೀನಿವಾಸಗೌಡ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com