ದುನಿಯಾ ವಿಜಯ್ ನಿರ್ದೇಶನದ 'ಭೀಮ' ರಿಲೀಸ್ ಡೇಟ್ ಫಿಕ್ಸ್!

ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.
ಭೀಮ ಸಿನಿಮಾ  ಸ್ಟಿಲ್
ಭೀಮ ಸಿನಿಮಾ ಸ್ಟಿಲ್

ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.

ನಟ ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ‘ಭೀಮ’ ಸಿನಿಮಾವನ್ನು ಆಗಸ್ಟ್ 9ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮಧ್ಯೆ ‘ಭೀಮ’ ಸಿನಿಮಾ ಕನ್ನಡದ ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ವಿಜಯ್ ಅವರು ‘ಸಲಗ’ ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದರು. ಇದು ಅವರ ನಿರ್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನಿರ್ದೇಶನ ಮಾಡಿದ್ದಾರೆ ವಿಜಯ್. ಚಿತ್ರದಲ್ಲಿ ಭೀಮನಿಗೆ ಜೋಡಿಯಾಗಿ ಅಶ್ವಿನಿ ನಟಿಸಿದ್ದು, ರಂಗಾಯಣ ರಘು, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಕಲ್ಯಾಣಿ ಮತ್ತಿತರರು ಅಭಿನಯಿಸಿದ್ದಾರೆ. ಮಾಸ್ತಿ ಸಂಭಾಷಣೆ ಚಿತ್ರಕ್ಕಿದ್ದು, ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಭೀಮ ಸಿನಿಮಾ  ಸ್ಟಿಲ್
ದುನಿಯಾ ವಿಜಯ್ ನಟನೆಯ 'ಭೀಮ' ರಿಲೀಸ್‌ಗೆ ಸಿದ್ಧ; ಸ್ವಾತಂತ್ರ್ಯ ದಿನದಂದು ಬಿಡುಗಡೆಗೆ ಚಿತ್ರತಂಡ ಚಿಂತನೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com