ನಟ ದರ್ಶನ್​ಗೆ ಮಹಿಳಾ ಆಯೋಗದಿಂದ ನೋಟಿಸ್​: 10 ದಿನದಲ್ಲಿ ಉತ್ತರಿಸುವಂತೆ ಸೂಚನೆ!

ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವದಲ್ಲಿ ಹೆಣ್ಣಿನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.
ದರ್ಶನ್
ದರ್ಶನ್
Updated on

ಬೆಂಗಳೂರು: ಕಾಟೇರ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶನ್​ ನೀಡಿದ್ದ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ನಟ ದರ್ಶನ್​ಗೆ ರಾಜ್ಯ ಮಹಿಳಾ ಆರೋಗ ನೋಟಿಸ್​ ಜಾರಿ ಮಾಡಿದೆ.

ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿ ಪರ್ವದಲ್ಲಿ ಹೆಣ್ಣಿನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಗೌಡತಿಯರ ಸಂಘ ನೀಡಿದ ದೂರನ್ನು ಆಧರಿಸಿ ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆರೋಗವು ಒಂದು ವಾರದೊಳಗೆ ವಿವರಣೆ ನೀಡುವಂತೆ ಜಾರಿ ಮಾಡಲಾಗಿರುವ ನೋಟಿಸ್​ನಲ್ಲಿ ಸೂಚಿಸಲಾಗಿದೆ.

ದರ್ಶನ್
ದರ್ಶನ್ ವಿರುದ್ಧ ಸಿಡಿದೆದ್ದ ಶ್ರೀಶಕ್ತಿ ಮಹಿಳಾ ಸಂಘದಿಂದ ದೂರು: ನೀಡಿದ್ದ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ವಾರ್ಷಿಕೋತ್ಸವದ ಸಾರ್ವಜನಿಕ ಸಭೆಯಲ್ಲಿ ದರ್ಶನ್‌ ಮಹಿಳೆಯರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಗೌಡತಿಯರ ಸೇನೆ ಆರೋಪಿಸಿತ್ತು. ಇದನ್ನ ಖಂಡಿಸಿ ಗೌಡತಿಯ ಸೇನೆ ಪ್ರತಿಭಟನೆ ನಡೆಸಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಹೆಣ್ಣಿನ ಬಗ್ಗೆ ಅವಹೇಳನಕಾರಿಯಾಗಿ ದರ್ಶನ್ ಮಾತನಾಡಿದ್ದಾರೆ. ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ವೇದಿಕೆಯ ಮೇಲೆಯೇ ಹೇಳಿದ್ದಾರೆ. ಈ ಹೇಳಿಕೆಗೆ ವಿರೋಧಿಸಿ ಒಕ್ಕಲಿಗ ಗೌಡತಿಯರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಹೆಣ್ಣು ಮಕ್ಕಳಿಗೆ ಇದು ಅವಮಾನ ಮಾಡುವಂಥದ್ದು ಎಂದು ಮಹಿಳಾ ಆಗೋಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com