ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಚಿತ್ರ ನಿರ್ದೇಶಕ ಎಂ.ಎಸ್. ಸತ್ಯುಗೆ "ಜೀವಮಾನ ಸಾಧನೆ ಪ್ರಶಸ್ತಿ"

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ"ದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
'ಸತ್ಯು ಅವರ ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ 'ಬರ' ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು. ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ 'ಫಿಲ್ಮ್ ಫೇರ್ ಪ್ರಶಸ್ತಿ'ಯನ್ನು ಪಡೆದಿತ್ತು. ಅವರ ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ. ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



