ಶರಣ್ ಅಭಿನಯದ 'ಛೂ ಮಂತರ್' ಚಿತ್ರ ಏಪ್ರಿಲ್ 5ಕ್ಕೆ ಬಿಡುಗಡೆ

ನಟ ಶರಣ್ ಡಬಲ್ ಖುಷಿಯಲಿದ್ದಾರೆ. ಅವತಾರ ಪುರುಷ-2 ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಂದು ಚಿತ್ರ 'ಛೂ ಮಂತರ್' ಸಿನಿಮಾ ಏಪ್ರಿಲ್ 5ಕ್ಕೆ ಬಿಡುಗಡೆಯಾಗುತ್ತಿದೆ.
ನಟ ಶರಣ್
ನಟ ಶರಣ್
Updated on: 

ನಟ ಶರಣ್ ಡಬಲ್ ಖುಷಿಯಲಿದ್ದಾರೆ. ಅವತಾರ ಪುರುಷ-2 ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಂದು ಚಿತ್ರ 'ಛೂ ಮಂತರ್' ಸಿನಿಮಾ ಏಪ್ರಿಲ್ 5ಕ್ಕೆ ಬಿಡುಗಡೆಯಾಗುತ್ತಿದೆ.

ಛೂ ಮಂತರ್ ಸಿನಿಮಾ ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಮೇಕಿಂಗ್ ನೋಡಿದಾಗ ಹಾಲಿವುಡ್ ಚಿತ್ರಗಳನ್ನು ನೋಡಿದ ಹಾಗೆ ಭಾಸವಾಗುತ್ತದೆ.

ಶರಣ್ ಅವರ ಪಾತ್ರ ಕೂಡ ಈ ಹಿಂದಿನ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ. ಉಪಾಧ್ಯಕ್ಷನಾಗಿ ಯಶಸ್ಸು ಕಂಡಿರುವ ಚಿಕ್ಕಣ್ಣ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸಮ್ಮಿಲನ ಈ ಚಿತ್ರದಲ್ಲಾಗಿದೆ. ಚಿತ್ರದ ಮತ್ತೊಂದು ಪ್ರಮುಖ ಅಂಶವೆಂದರೆ 50 ನಿಮಿಷಗಳ VFX ಅನ್ನು ಸಂಯೋಜಿಸಿರುವುದು.

ನಟ ಶರಣ್
ಶರಣ್ ಅಭಿನಯದ ಬಹುನಿರೀಕ್ಷಿತ 'ಅವತಾರ ಪುರುಷ 2' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿ

ಕರ್ವಾ ನವ್ನೀತ್ ರಚಿಸಿ ನಿರ್ದೇಶಿಸಿರುವ ಹಾರರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮೇಘನ ಗಾವಂಕರ್, ಅದಿತಿ ಪ್ರಭುದೇವ, ಚಿಕ್ಕಣ್ಣ, ರಜನಿ ಭಾರದ್ವಾಜ್, ಪ್ರಭು ತೆರೆ ಹಂಚಿಕೊಂಡಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ನಡಿ ತರುಣ್ ಶಿವಪ್ಪ ಮತ್ತು ಅವರ ಪತ್ನಿ ಮಾನಸ ಈ ಸಿನೆಮಾಗೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿಯವರು ಸಂಗೀತ ನೀಡಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ಹಾಗೂ ಟೀಸರ್ ಈಗಾಗಲೇ ಪ್ರೇಕ್ಷಕರ ಹುಬ್ಬೇರುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com