‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಚಿತ್ರೀಕರಣ​ ಮುಗಿಸಿದ ಚಂದನ್ ಶೆಟ್ಟಿ

ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ತಂಡ
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ತಂಡ
Updated on

ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ.

ಚಿತ್ರೀಕರಣ ಕುರಿತು ಮಾಹಿತಿ ನೀಡಿದ ನಿರ್ದೇಶಕ ಅರುಣ್ ಅಮುಕ್ತ ಅವರು, ಮೈಸೂರು, ಬೆಂಗಳೂರು, ಚಿಕ್ಕಮಗಳೂರು, ಮಂಗಳೂರು ಮುಂತಾದ ಕಡೆಗಳಲ್ಲಿ 50 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಇದೀಗ ಚಿತ್ರ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಸದ್ಯಕ್ಕೆ ಎಲ್ಲೆಲ್ಲೂ ರಾಜಕೀಯದ ಕಾವು ಇದೆ. ಹಾಗಾಗಿ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟ ಆದ ಬಳಿಕ ಈ ಸಿನಿಮಾವನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ತಂಡ
'ವಾಟ್ ಟು ಡು ಮಾಮ?': ಹೊಸ ವರ್ಷಕ್ಕೆ ಹೊಸ ಹಾಡು ಬಿಡುಗಡೆ ಮಾಡಿದ ಚಂದನ್ ಶೆಟ್ಟಿ

ರ್ಯಾಪರ್ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರ ದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಾಗಿದೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳು ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳಾಗಿವೆ. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿ ಪರಿಣಮಿಸಿತ್ತು. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ್ದಾರೆಂದು ತಿಳಿಸಿದರು.

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com