ದೀರ್ಘ ಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ 28 ವರ್ಷಕ್ಕೆ ಇಹ ಲೋಕ ತ್ಯಜಿಸಿದ್ದಾರೆ, ಹೊಸ ಹೊಸ ಆಲೋಚನೆಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದ ತಮಿಳಿನ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನದಿಂದ ತಮಿಳು ಚಿತ್ರ ರಂಗ ಆಘಾತಕ್ಕೊಳಗಾಗಿದೆ.
ಮೇಡಗು, ರಾಕಥಾನ್ ನಂತಹ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿ ಸೈ ಅನಿಸಿಕೊಂಡಿದ್ದರು ಪ್ರವೀಣ್. ಇವರ ಪ್ರತಿಭೆಗೆ ಕೈ ತುಂಬಾ ಅವಕಾಶಗಳು ಇದ್ದವು. ಆದರೆ, ಆರೋಗ್ಯ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಕೆಲ ವಾರಗಳ ಹಿಂದೆ ಕಿಡ್ನಿ ಸಮಸ್ಯೆಯಿಂದ ಪ್ರವೀಣ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿಯಾಗಿದೆ. ಅವರು ಇತ್ತೀಚೆಗೆ ಅವರನ್ನು ಓಮಂದೂರು ಜಿಎಚ್‌ಗೆ ಸ್ಥಳಾಂತರಿಸಿಲಾಗಿತ್ತು, ಚಿಕಿತ್ಸೆ ಫಲಕಾರಿಯಾಗಿ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನಕ್ಕೆ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಅವರ ಹುಟ್ಟೂರಾದ ತಂಜಾವೂರಿನಲ್ಲಿರುವ ಅವರ ಮನೆಯಲ್ಲಿ ಅಂತ್ಯಕ್ರಿಯೆ ನಡೆಯುವ ನಿರೀಕ್ಷೆಯಿದೆ.
Advertisement