ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಕವಿತಾ ಮತ್ತು ನಟ ಚಂದನ್ ಕುಮಾರ್ ದಂಪತಿ!

ಲಕ್ಷ್ಮಿ ಬಾರಮ್ಮ ಖ್ಯಾತಿಯ ನಟಿ ಕವಿತಾ ಮತ್ತು ಚಂದನ್ ಕುಮಾರ್ ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ನಟಿ ಕವಿತಾ ಮತ್ತು ನಟ ಚಂದನ್ ಕುಮಾರ್ ದಂಪತಿ
ನಟಿ ಕವಿತಾ ಮತ್ತು ನಟ ಚಂದನ್ ಕುಮಾರ್ ದಂಪತಿ

ಬೆಂಗಳೂರು: ಲಕ್ಷ್ಮಿ ಬಾರಮ್ಮ ಖ್ಯಾತಿಯ ನಟಿ ಕವಿತಾ ಮತ್ತು ಚಂದನ್ ಕುಮಾರ್ ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಗ್ಗೆ ಈ ಸ್ಟಾರ್ ದಂಪತಿ ಇನ್ ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಫೋಟೋವನ್ನು ಶೇರ್​ ಮಾಡಿಕೊಳ್ಳುವ ಮೂಲಕ ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ ಎಂದು ತಿಳಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್​ಗೆ ಶುಭ ಹಾರೈಸುತ್ತಿದ್ದಾರೆ.

ನಟಿ ಕವಿತಾ ಮತ್ತು ನಟ ಚಂದನ್ ಕುಮಾರ್ ದಂಪತಿ
ನಟಿ ಕವಿತಾ ಗೌಡ ಮತ್ತು ನಟ ಚಂದನ್ ಕುಮಾರ್ ಸರಳ ವಿವಾಹ; ಮಾಸ್ಕ್ ಧರಿಸಿಯೇ ಸಪ್ತಪದಿ ತುಳಿದ ಜೋಡಿ!

ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿಯಾಗಿದ್ದು, ಚಂದನ್​ ಕುಮಾರ್ ಕೂಡ​ ಅವರು ಕಿರುತೆರೆ ಬೆಳ್ಳಿತೆರೆಯಲ್ಲಿ ಮುಂಚಿದ್ದರು. ಸಾಕಷ್ಟು ಚಿತ್ರಗಳಲ್ಲಿ ಮತ್ತು ಕನ್ನಡ ಮಾತ್ರವಲ್ಲ ತೆಲುಗು ಸೀರಿಯಲ್ ಗಳಲ್ಲಿ ಚಂದನ್ ನಟಿಸಿದ್ದರು. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್‌ಡೌನ್ ಸಮಯದಲ್ಲಿ ಈ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಕವಿತಾ ಮತ್ತು ಚಂದನ್ ದಂಪತಿ ಮಂಡಿಪೇಟೆ ಪಲಾವ್ ಹೆಸರಿನ ಹೊಟೆಲ್ ಅನ್ನು ಕೂಡ ಹೊಂದಿದ್ದು, ಇದು ಸಾಕಷ್ಟು ಶಾಖೆಗಳನ್ನು ಹೊಂದಿದೆ. ಇತ್ತೀಚೆಗಷ್ಟೇ ಮೈಸೂರು ರಸ್ತೆಯಲ್ಲಿ ಸಸ್ಯಾಹಾರಿ ಶಾಖೆಯನ್ನು ಕೂಡ ತೆರೆದಿದ್ದರು. ಇದೀಗ ಈ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ನಟ ಚಂದನ್ ಕುಮಾರ್​ ಹಾಗೂ ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಇನ್ನು ಈ ಫೋಟೋಗೆ ವಿನಯ್​​ ಗೌಡ, ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ಪ್ರಿಯಾಂಕಾ ಚಿಂಚೋಳಿ, ಪ್ರಿಯಾಂಕಾ ಶಿವಣ್ಣ ಇನ್ನಿತರರು ಕವಿತಾ ಗೌಡ ದಂಪತಿಗೆ ಶುಭಾಶಯ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com