
ದರ್ಶನ್ ನಟನೆಯ ಡೆವಿಲ್ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ. ವಾಮನ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ರಚನಾ ರೈ ಡೆವಿಲ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಇವರು ಶಂಕರ್ ರಾಮನ್ ನಿರ್ದೇಶನದ ವಾಮನ ಸಿನಿಮಾಗೆ ನಾಯಕಿಯಾಗಿದ್ದರು. ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ವಾಮನ ಮೊದಲ ಕನ್ನಡ ಸಿನಿಮಾವಾಗಿತ್ತು.
ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ. ಈಗ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ.
Advertisement