ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ

ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ. ದರ್ಶನ್, ಧ್ರುವ ಸರ್ಜಾ ಮತ್ತು ಡಾಲಿ ಧನಂಜಯ್ ಅಭಿನಯದ ತೀವ್ರ ಕುತೂಹಲ ಕೆರಳಿಸಿರುವ ಸಿನಿಮಾಗಳು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣಲು ಸಿದ್ಧವಾಗುತ್ತಿವೆ.
ಉತ್ತರಕಾಂಡ ಸಿನಿಮಾದ ಸ್ಟಿಲ್

ಮೊದಲಿಗೆ, ಪ್ರಕಾಶ್ ವೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಈ ವರ್ಷ ಕ್ರಿಸ್‌ಮಸ್‌ಗೆ ತೆರೆಕಾಣಲಿದೆ ಎಂದು ವೈಷ್ಣೋ ಸ್ಟುಡಿಯೋಸ್ ಘೋಷಿಸಿದೆ. ಬಳಿಕ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಬಹುಭಾಷಾ ಚಿತ್ರ KD ಕೂಡ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಕಾಣುವ ಗುರಿಯನ್ನು ಹೊಂದಿದೆ. ಇದೀಗ ಡಾಲಿ ಧನಂಜಯ್-ಶಿವರಾಜ್‌ಕುಮಾರ್ ಅಭಿನಯದ ಕೆಆರ್‌ಜಿ ಸ್ಟುಡಿಯೋಸ್‌ನ ಉತ್ತರಕಾಂಡ ಡಿಸೆಂಬರ್‌ನಲ್ಲೇ ಬಿಡುಗಡೆಗೆ ಸಿದ್ಧವಾಗಿದೆ.

ಉತ್ತರಕಾಂಡದ ಚಿತ್ರೀಕರಣ ಬೆಳಗಾವಿಯಲ್ಲಿ ಎರಡನೇ ಶೆಡ್ಯೂಲ್‌ಗೆ ಸಾಗಿದ್ದು, ಶಿವಣ್ಣ ಇತ್ತೀಚೆಗೆ ಸೆಟ್‌ಗೆ ಸೇರಿದ್ದಾರೆ. ಉತ್ತರಕಾಂಡ ಸಿನಿಮಾ ಟಗರು ಖ್ಯಾತಿಯ ಹಿಟ್ ಜೋಡಿ ಶಿವಣ್ಣ ಮತ್ತು ಧನಂಜಯ್ ಅವರನ್ನು ಬೆಳ್ಳಿತೆರೆಯಲ್ಲಿ ಮತ್ತೆ ಒಂದಾಗಿಸುವುದು ಮಾತ್ರವಲ್ಲದೆ ತಮಿಳು ನಟಿ ಐಶ್ವರ್ಯಾ ರಾಜೇಶ್ ಅವರು ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಶಿವಣ್ಣ ಜೊತೆಗೆ ಭಾವನಾ ಮತ್ತು ದಿಗಂತ್ ಮತ್ತು ಚೈತ್ರ ಜೆ ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದು, ಉಮಾಶ್ರೀ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಉತ್ತರಕಾಂಡ ಸಿನಿಮಾದ ಸ್ಟಿಲ್
'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ

ರೋಹಿತ್ ಪದಕಿ ನಿರ್ದೇಶನದ ಈ ಚಿತ್ರಕ್ಕೆ ಬಾಲಿವುಡ್ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಾಣದ ಈ ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com