ಬೆಂಗಳೂರು: ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಶೀಘ್ರದಲ್ಲೇ ತಂದೆ-ತಾಯಿಯಾಗುತ್ತಿರುವ ಸಿಹಿಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಮಾಲ್ಡೀವ್ಸ್ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.
ಫೋಟೋಗಳಲ್ಲಿ ಹರಿಪ್ರಿಯಾ ಬೇಬಿ ಬಂಪ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ನಟ ವಸಿಷ್ಠ ಸಿಂಹ ಅವರು ಬೇಬಿ ಬಂಪ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ನಟಿ ಹರಿಪ್ರಿಯಾ ಅವರು, ಈ ಶುಭ ದಿನದಂದು ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶಿವಾದಗಳ ನಿರೀಕ್ಷೆಯಲ್ಲಿ ಎಂದು ಬರೆದಿದ್ದಾರೆ.
ನಟಿ ಹರಿಪ್ರಿಯಾ ಅವರು ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ವಿಡಿಯೋದಲ್ಲಿ ನಟಿ ಗರ್ಭಿಣಿ ಹಾಗೇ ಹಾಣಿಸಿಕೊಂಡಿದ್ದರು. ಬಳಿಕ ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳ ಸುರಿಮಳೆ ಸುರಿಸಿದ್ದರು. ಇದೀಗ ಅಭಿಮಾನಿಗಳ ಊಹೆ ನಿಜವಾಗಿದೆ.
Advertisement