'ಮುಫ್ತಿ' ಪ್ರಿಕ್ವೆಲ್ 'ಭೈರತಿ ರಣಗಲ್' ಸಿನಿಮಾ ಸೀಕ್ವೇಲ್ ನಿರ್ಮಾಣಕ್ಕೆ ಚಿಂತನೆ!

ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರಲಿದೆ. "ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಬಹಳ ಇಷ್ಟ. ನಿರ್ದೇಶಕ ನರ್ತನ್, "ಭೈರತಿ ರಣಗಲ್" ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು.
Bhairathi Ranagal  cinema still
ಭೈರತಿ ರಣಗಲ್ ಸಿನಿಮಾ ಸ್ಟಿಲ್
Updated on

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದ ಶಿವರಾಜಕುಮಾರ್ ನಟನೆಯ ನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದ ‘ಅಜ್ಞಾತವಾಸ’ ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಯಿತು.

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರಲಿದೆ. "ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಬಹಳ ಇಷ್ಟ. ನಿರ್ದೇಶಕ ನರ್ತನ್, "ಭೈರತಿ ರಣಗಲ್" ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು. ನಮ್ಮ ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಭೈರತಿ ರಣಗಲ್‌ನಲ್ಲಿನ ತಮ್ಮ ಪಾತ್ರದ ಬಗ್ಗೆ ಶಿವರಾಜ್‌ಕುಮಾರ್ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಚಿತ್ರದ ಮುಂದುವರಿದ ಭಾಗಕ್ಕಾಗಿ ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

ಕಥೆಯ ಬಗ್ಗೆ ಮಾತನಾಡಿದ ನಿರ್ದೇಶಕ ನರ್ತನ್ ಶಿವಣ್ಣ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಬ್ಬರೂ ಕಥೆ ಒಪ್ಪಿಕೊಂಡಿದ್ದಾರೆ. "ಇದು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡ ನಮ್ಮ ಎರಡನೇ ಚಿತ್ರ" ಎಂದು ಅವರು ಚಿತ್ರದ ಯಶಸ್ಸಿಗೆ ಪಾತ್ರವರ್ಗ ಮತ್ತು ಸಿಬ್ಬಂದಿಯ ಕೊಡುಗೆಯನ್ನು ವ್ಯಕ್ತಪಡಿಸಿದರು.ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನನ್ನ ಕಥೆಗೆ ಶಿವಣ್ಣ ಸೇರಿದಂತೆ ಎಲ್ಲಾ ಕಲಾವಿದರು ಜೀವ ತುಂಬಿದ್ದಾರೆ. ತಂತ್ರಜ್ಞರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ "ಭೈರತಿ ರಣಗಲ್" ಉತ್ತಮ ಚಿತ್ರವಾಗಿ ನಿಮ್ಮ ಮುಂದೆ ಬರಲಿದೆ. ನವೆಂಬರ್‌ 5 ರಂದು ಟ್ರೇಲರ್ ಬರಲಿದೆ. ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರೂ ನೋಡಿ ಹಾರೈಸಿ ಎಂದು ನಿರ್ದೇಶಕ ನರ್ತನ್ ತಿಳಿಸಿದರು.

Bhairathi Ranagal  cinema still
ಕಣ್ಣಲ್ಲೇ ಕೊಲ್ಲುವ ನೋಟ 'ಭೈರತಿ ರಣಗಲ್' ಚಿತ್ರದ ಟೀಸರ್

ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ರುಕ್ಮಿಣಿ ವಸಂತ್ ಹೇಳಿದರು. ದೇವರಾಜ್, ಅವಿನಾಶ್, ರಾಹುಲ್ ಬೋಸ್, ಛಾಯಾಸಿಂಗ್, ಬಾಬು ಹಿರಣಯ್ಯ, ಮಧು ಗುರುಸ್ವಾಮಿ, ಪ್ರತಾಪ್, ಶಬೀರ್ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಮುಂತಾದ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಅವರ ಛಾಯಾಗ್ರಹಣ, ರವಿ ಬಸ್ರೂರ್ ಅವರ ಸಂಗೀತ, ಡಾ ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಚೇತನ್ ಡಿಸೋಜಾ ಅವರ ಸಾಹಸ ನಿರ್ದೇಶನ ಮತ್ತು ಗುಣ ಅವರ ಕಲಾ ನಿರ್ದೇಶನವಿದೆ. ಭೈರತಿ ರಣಗಲ್ ಬಹು ಭಾಷೆಗಳಲ್ಲಿ ಥಿಯೇಟರ್‌ಗಳಿಗೆ ಬರಲು ಸಜ್ಜಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com