ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಿರ್ದೇಶಕ ಗುರುಪ್ರಸಾದ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಭಾಧೆಯಿಂದ ಅವರು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ‘ಮಠ’ ಹಾಗೂ ‘ಎದ್ದೇಳು ಮಂಜುನಾಥ್’ ರೀತಿಯ ಹಿಟ್ ಸಿನಿಮಾಗಳನ್ನು ನೀಡಿದ ನಿರ್ದೇಶಕ ಹೀಗೆ ದಿಢೀರ್ ಬಾರದಲೋಕಕ್ಕೆ ಪಯಣ ಬೆಳೆಸಿದ್ದು ನಿಜಕ್ಕೂ ಬೇಸರದ ಸಂಗತಿ.
ಇನ್ನು ಗುರುಪ್ರಸಾದ್ ನಿಧನ ಸುದ್ದಿ ಹೊರಬೀಳುತ್ತಿದ್ದಂತೆ ನಟ ಜಗ್ಗೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಆದರೆ ಗುರು ಪ್ರಸಾದ್ ಕುರಿತು ನವರಸ ನಾಯಕನ ಕೆಲ ಹೇಳಿಕೆ ಬೇಸರ ಮೂಡಿಸಿತ್ತು. ಗುರುಪ್ರಸಾದ್ ಸುತ್ತಾ ನಟ ಜಗ್ಗೇಶ್ ಆಡಿದ ಕೆಲ ಮಾತುಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.
ತಮ್ಮ ವಿರುದ್ಧ ಮಾತನಾಡಿದವರಿಗೆ ಜಗ್ಗೇಶ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. "ಆನೆ ನಡೆಯೋವಾಗ ಶ್ವಾನಗಳು ಉಸಿರು ಹೋಗುವಂತೆ ಅರಚುತ್ತದೆ. ಅದಕ್ಕೆ ಸೈಂಟಿಫಿಕ್ ಕಾರಣ "ಭಯ". ಎರಡನೆಯದು ಏನು ನಾವು ನೆಲದಷ್ಟೆ ಹೀಗಿದ್ದೇವೆ. ಆನೆ ಮಾತ್ರ ಮುಗಿಲೆತ್ತರ ಬೆಳೆದಿದೆ ಎಂಬ ಸಂಕಟ. ಇದರ ತಾತ್ಪಾರ್ಯ "ನಿನ್ನ ಕೆಲಸ ನೀನು ಗಾಂಭೀರ್ಯದಿಂದ ಮಾಡುತ್ತಿರು. ಶ್ವಾನವು ಅವುಗಳ ಕೆಲಸ ಮಾಡದೇ ಬೇರೆ ವಿಧಿಯಿಲ್ಲಾ ಬೊಗಳುತ್ತದೆ. ಆನೆಯಾಗಲು ಯೋಗ ಬೇಕು" ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಜಗ್ಗೇಶ್ ತಮ್ಮ ವಿರುದ್ಧ ಮಾತನಾಡಿದವರಿಗೆ ಪರೋಕ್ಷವಾಗಿ ತಿರುಗೇಟು ಕೊಟ್ಟಿರುವುದು ಗೊತ್ತಾಗುತ್ತಿದೆ.
Advertisement