
ಬೆಂಗಳೂರು: ಎಲ್ಲರ ರೀತಿ ನಾನು ಮನುಷ್ಯನೇ, ನನಗೂ ಆರೋಗ್ಯ ಸಮಸ್ಯೆಯಿದೆ, ನಾನು ಸುಳ್ಳು ಹೇಳಲ್ಲ, ಟ್ರೀಟ್ ಮೆಂಟ್ ತಗೋತಿದ್ದೇನೆ, ಆರೋಗ್ಯ ಸಮಸ್ಯೆಯಿಂದ ನನಗೆ ಗಾಬರಿಯಾಗಿತ್ತು ಆದರೆ ಟ್ರೀಟ್ ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ನನಗೆ ಅನಾರೋಗ್ಯ ಇರುವುದು ನಿಜ, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ, ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ. ಜನವರಿಯಿಂದ ನಾನು ಫುಲ್ ಫಾರ್ಮ್ ಶಿವಣ್ಣ ಆಗಿ ಬರುತ್ತೇನೆ ಎಂದಿದ್ದಾರೆ.
ತಮ್ಮ ಅನಾರೋಗ್ಯದ ವಿಚಾರದ ಬಗ್ಗೆ ನಿರ್ಮಾಪಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ಮುಂದೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಹೇಳಿದ್ದೇನ, ಈ ನಡುವೆ ನಾನು 45 ಸಿನಿಮಾದಲ್ಲಿ ಭಾಗಿಯಾಗಿದ್ದೇನೆ, ಆ್ಯಕ್ಷನ್ ಸೀನ್ ಮಾಡಿದ್ದೇನೆ ಎಂದಿದ್ದಾರೆ. ಉಳಿದ ಸಮಯದಲ್ಲಿ ನಾವು ಅಭಿಮಾನಿಗಳು ಬೇಕು ಎನ್ನುತ್ತೇವೆ. ಈ ರೀತಿ ವಿಚಾರ ಬಂದಾಗ ಏಕೆ ಅವರನ್ನು ದೂರ ಇಡಬೇಕು? ಈ ಕಾರಣಕ್ಕೆ ನಾನು ಸುಳ್ಳು ಹೇಳೋದು ಬೇಡ ಎಂದು ಗೀತಾ ಅವರ ಬಳಿ ಹೇಳಿದೆ. ಅಭಿಮಾನಿಗಳು ಫೋಟೋ ತೆಗೆಸಿಕೊಳ್ಳೋಕೆ ಬಂದಾಗ ದೂರ ನಿಲ್ಲಿ ಎನ್ನುತ್ತೇನೆ. ಅವರಿಗೆ infection ಆಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದೇನೆ ಅಷ್ಟೇ. ಇದೆಲ್ಲ ಇನ್ನೆರಡು ತಿಂಗಳು ಅಷ್ಟೇ’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
Advertisement