ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ವಿಧಿವಶ

ಕೆ ಬಾಲಚಂಧರ್ ಅವರಂತಹ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್ ಅವರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಕೆಲಸ ಮಾಡಿದ್ದರು.
ಡೆಲ್ಲಿ ಗಣೇಶ್
ಡೆಲ್ಲಿ ಗಣೇಶ್
Updated on

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ಮತ್ತು ಖ್ಯಾತ ನಟ ಡೆಲ್ಲಿ ಗಣೇಶ್ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಡೆಲ್ಲಿ ಗಣೇಶ್ ಅವರಿಗೆ ಅವರಿಗೆ 80 ವರ್ಷ ವಯಸ್ಸಾಗಿತ್ತು.

ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಡೆಲ್ಲಿ ಗಣೇಶ್ ಅವರು, ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.

ಕೆ ಬಾಲಚಂಧರ್ ಅವರಂತಹ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್ ಅವರು, ಹಲವು ಸ್ಟಾರ್ ನಟ-ನಟಿಯರೊಟ್ಟಿಗೆ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಕೆಲಸ ಮಾಡಿದ್ದರು.

ಡೆಲ್ಲಿ ಗಣೇಶ್
ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

ಆರಂಭದಲ್ಲಿ ನಾಯಕ, ಎರಡನೇ ನಾಯಕ, ವಿಲನ್​ ಪಾತ್ರಗಳಲ್ಲಿ ನಟಿಸಿದ ಡೆಲ್ಲಿ ಗಣೇಶ್, ವಯಸ್ಸಾದಂತೆ, ತಂದೆ, ಮಾವ, ಚಿಕ್ಕಪ್ಪ ಹೀಗೆ ಬೇರೆ ಬೇರೆ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿಯೂ ನಟನೆ ಮಾಡಿದ್ದಾರೆ.

1976 ರಿಂದಲೂ ನಟಿಸುತ್ತಿರುವ ಡೆಲ್ಲಿ ಗಣೇಶ್ ಅವರು, ತಮಿಳು, ಮಲಯಾಳ, ತೆಲುಗು ಹಾಗೂ ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ ನಟಿಸಿರುವ ‘ಚೆನ್ನೈ ಎಕ್ಸ್​ಪ್ರೆಸ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಸುಮಾರು 25ಕ್ಕೂ ಹೆಚ್ಚು ಟಿವಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com