ಬಿಗ್ ಬಾಸ್ ಕನ್ನಡ ಸೀಸನ್ 8ರ (Bigg Boss) ವಿಜೇತ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ಮಂಜು ಮದುವೆ ಆಗಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಂಜು ತಮ್ಮ ಹುಟ್ಟೂರಾದ ಪಾವಗಡದಲ್ಲೇ ನಂದಿನಿ ಜೊತೆ ವಿವಾಹವಾಗಿದ್ದಾರೆ. ಮದುವೆಗೆ ನಟಿ ಶುಭಾ ಪೂಂಜಾ ಸೇರಿ ಅನೇಕರು ಭಾಗಿ ದಂಪತಿಗಳಿಗೆ ಶುಭ ಹಾರೈಸಿದರು. ಅಲ್ಲದೆ ನಟಿ ಮದುವೆಯಲ್ಲಿ ಭಾಗಿಯಾಗಿದ್ದ ತಮ್ಮ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅನೇಕರ ಸೆಲೆಬ್ರಿಟಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.
ಕಾಮಿಡಿ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಫೇಮಸ್ ಆಗಿದ್ದ ಮಂಜು ಪಾವಗಡ ಅವರು ಬಿಗ್ ಬಾಸ್ ವಿನ್ನರ್ ಆಗಿದ್ದರು. ನಂತರ ಅಂತರಪಟ ಧಾರಾವಾಹಿಯಲ್ಲಿ ಮಂಜು ಪಾವಗಡ ನಟಿಸುತ್ತಿದ್ದಾರೆ. ಇದರ ಜೊತೆಗೆ ಕಲರ್ಸ್ ಕನ್ನಡದ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.
Advertisement