ಕನ್ನಡದ ಹಿರಿಯ ನಟ ಟಿ ತಿಮ್ಮಯ್ಯ ನಿಧನ

ವರನಟ ಡಾ.ರಾಜ್‌ಕುಮಾರ್, ಡಾ. ವಿಷ್ಣುವರ್ಧನ್‌, ಅನಂತ್ ನಾಗ್ ಸೇರಿದಂತೆ ಪ್ರಮುಖ ನಟರ ಜೊತೆ ತೆರೆ ಹಂಚಿಕೊಂಡಿದ್ದ ತಿಮ್ಮಯ್ಯ ಅವರು, ಖಡಕ್ ಪೊಲೀಸ್ ಅಧಿಕಾರಿ ಪಾತ್ರಗಳನ್ನು ನಿರ್ವಹಿಸಿದ್ದರು.
ಹಿರಿಯ ನಟ ಟಿ. ತಿಮ್ಮಯ್ಯ
ಹಿರಿಯ ನಟ ಟಿ. ತಿಮ್ಮಯ್ಯ
Updated on

ಬೆಂಗಳೂರು: ಕನ್ನಡದ ಹಿರಿಯ ನಟ ಟಿ. ತಿಮ್ಮಯ್ಯ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 92 ವರ್ಷದ ತಿಮ್ಮಯ್ಯ ಅವರ ಅಂತ್ಯ ಸಂಸ್ಕಾರ ನಾಳೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ.

ವರನಟ ಡಾ.ರಾಜ್‌ಕುಮಾರ್, ಡಾ. ವಿಷ್ಣುವರ್ಧನ್‌, ಅನಂತ್ ನಾಗ್ ಸೇರಿದಂತೆ ಪ್ರಮುಖ ನಟರ ಜೊತೆ ತೆರೆ ಹಂಚಿಕೊಂಡಿದ್ದ ತಿಮ್ಮಯ್ಯ ಅವರು, ಖಡಕ್ ಪೊಲೀಸ್ ಅಧಿಕಾರಿ ಪಾತ್ರಗಳನ್ನು ನಿರ್ವಹಿಸಿದ್ದರು.

ತಿಮ್ಮಯ್ಯ ಅವರು ನಟಿಸಿದ ಪ್ರಮುಖ ಚಿತ್ರಗಳೆಂದರೆ ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ, ಈ ಜೀವ ನಿನಗಾಗಿ, ಕುರುಕ್ಷೇತ್ರ, ಬೆಳದಿಂಗಳ ಬಾಲೆ ಚಿತ್ರಗಳು ಸೇರಿವೆ.

ಹಿರಿಯ ನಟ ಟಿ. ತಿಮ್ಮಯ್ಯ
ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ವಿಧಿವಶ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com