ಸಚಿವ ಜಮೀರ್ ಅಹಮದ್ ಖಾನ್ ಅವರು ಹಿಂದೊಮ್ಮೆ ಹೇಳಿದ್ದ 'CONGRATULATIONS ಬ್ರದರ್' ಎಂಬ ಮಾತು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುವುದರ ಜೊತೆಗೆ ಟ್ರೆಂಡ್ ಆಗಿತ್ತು. ಇದೀಗ ಇದೇ ಡೈಲಾಗ್ ನ್ನು ಸಿನಿಮಾ ಶೀರ್ಷಿಕೆಯಾಗಿ ಬಳಸಿಕೊಂಡು, ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ.
ಕನ್ನಡದಲ್ಲಿ ಅಲೆಮಾರಿ ಹಾಗೂ ಇತ್ತೀಚೆಗೆ 'ಕಾಲೇಜ್ ಕುಮಾರ' ಎಂಬ ಸಿನಿಮಾ ಮಾಡಿ ಸಕ್ಸಸ್ ಕಂಡಿದ್ದ ನಿರ್ದೇಶಕ ಹರಿ ಸಂತೋಷ್ ಸಾರಥ್ಯದಲ್ಲಿ ಈ ಚಿತ್ರ ಲಾಂಚ್ ಆಗಿದೆ.
ಕೆವಿಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಡಿ.ಎಸ್ ಮ್ಯಾಕ್ಸ್ನ ದಯಾನಂದ್ ಚಿತ್ರದ ಪೋಸ್ಟರ್'ನ್ನು ಅನಾವರಣ ಮಾಡಿದರು.
ಪೆನ್ ಮತ್ತು ಪೇಪರ್ ಪ್ರೊಡಕ್ಷನ್ಸ್ ಸಂಸ್ಥೆ ಚಿತ್ರವನ್ನು ಹೊರ ತರುತ್ತಿದ್ದು, ಸಿನಿಮಾವನ್ನು ಪ್ರತಾಪ್ ಗಂಧರ್ವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಹರಿ ಸಂತೋಷ್ ಕಥೆ ಬರೆದಿದ್ದರೆ, ರಕ್ಷಿತ್ ನಾಯಕನಟನಾಗಿ ಅನುಷಾ ಹಾಗೂ ಸಂಜನಾ ದಾಸ್ ನಾಯಕಿಯಾಗಿ ನಟಿಸುತ್ತಿದ್ದಾರೆ.
ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ಚಿತ್ರದ ಕಥೆಗಾರ ಹಾಗೂ ಕ್ರಿಯೇಟಿವ್ ಹೆಡ್ ಹರಿ ಸಂತೋಷ್ ಅವರು, ಎರಡು ವರ್ಷಗಳಿಂದ 12 ಜನ ಸ್ನೇಹಿತರು ಸೇರಿ 'ಪೆನ್ ಎನ್ ಪೇಪರ್' ಸಂಸ್ಥೆ ಆರಂಭಿಸಿದ್ದೆವು. ಈ ಮೂಲಕ ಹಲವು ವೆಬ್ ಸಿರೀಸ್ಗಳಿಗೆ ಹಾಗೂ ಕೆಲವು ಪ್ರೊಡಕ್ಷನ್ ಹೌಸ್ಗಳಿಗೆ ಕಥೆ ಒದಗಿಸಿಕೊಟ್ಟಿದ್ದೇವೆ. ಈಗ ಇದೇ ತಂಡದಿಂದ ಮೊದಲ ಸಿನಿಮಾ ಮಾಡುತ್ತಿದ್ದೇವೆ. ಅದೇ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ಚಿತ್ರ 'CONGRATULATIONS ಬ್ರದರ್'. ಇದಕ್ಕೆ ಕಥೆ ಬರೆಯಲು ಒಂದು ವರ್ಷವಾಯಿತು. ಮಾರ್ನಿಂಗ್ ಶೋ ಆಡಿಯನ್ಸ್ನ ತಲೆಯಲ್ಲಿಟ್ಟಿಕೊಂಡು ಕಥೆ ಮಾಡಿದ್ದೇವೆ. ನನ್ನ ತಂಡದಲ್ಲಿರುವ ಪ್ರತಾಪ್ ಗಂಧರ್ವ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಿರುತೆರೆಯಲ್ಲಿ ಗಮನ ಸೆಳೆದಿದ್ದ ರಕ್ಷಿತ್ ನಾಗ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ರವಿಕುಮಾರ್ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ಸಂಜನಾ ಈ ಚಿತ್ರದ ನಾಯಕಿ. ಅನುಷಾ ಎಂಬ ಹೊಸ ಹುಡುಗಿಯನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದೇವೆ. ರೊಮ್ಯಾಂಟಿಕ್ ಜಾನರ್ನ ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಪ್ರತಾಪ್, ರಕ್ಷಿತ್ ಮುಂತಾದವರು ಅಭಿನಯಿಸುತ್ತಿದ್ದಾರೆ ಎಂದು ತಿಳಿಸಿದರು.
'ನಿರ್ದೇಶಕ ಪ್ರತಾಪ್ ಗಂಧರ್ವ ಪ್ರತಿಕ್ರಿಯಿಸಿ, ಹಲವು ಧಾರಾವಾಹಿಗಳಿಗೆ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ನಮ್ಮ ತಂಡದ ಅನೇಕರಿಗೆ ಇದು ಹೊಸ ಹೆಜ್ಜೆ. ಸಾಮಾನ್ಯವಾಗಿ ಹೊಸ ಹೆಜ್ಜೆ ಅಷ್ಟು ಸುಲಭವಾಗಿರುವುದಿಲ್ಲ. ಅದನ್ನು ನಮಗೆ ಹರಿ ಸಂತೋಷ್ ಸುಲಭ ಮಾಡಿಕೊಟ್ಟಿದ್ದಾರೆ. ನಮ್ಮ ಕಥೆ ಪೇಪರ್ ನಲ್ಲಿ ಈಗಾಗಲೇ ಗದ್ದಿದೆ. ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ. ನಾಳೆಯಿಂದಲೇ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ಹೇಳಿಸಿದರು.
ರಕ್ಷಿತ್ ನಾಗ್ ಮಾತನಾಡಿ, ಕಿರುತೆರೆ ಹಾಗೂ ನಾಟಕಗಳಲ್ಲಿ ನಟಿಸಿರುವ ನನಗೆ ಹಿರಿತೆರೆಯಲ್ಲಿ ನಾಯಕನಾಗಿ ಅಭಿನಯಿಸುತ್ತಿರುವ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ನೀಡಿರುವ ಹರಿ ಸಂತೋಷ್ಗೆ ನಾನು ಅಭಾರಿ ಎಂದರು.
Advertisement