'ಮುಗಿಲ್ ಪೇಟೆ' ನಿರ್ದೇಶಕನ ಕೊಲೆ ಯತ್ನ ಆರೋಪ: 'ಜೋಡಿ ಹಕ್ಕಿ' ಧಾರಾವಾಹಿ ನಟ ತಾಂಡವ್ ರಾಮ್ ಬಂಧನ

ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು.
Tandav Ram
ನಟ ತಾಂಡವ್ ರಾಮ್
Updated on

ಬೆಂಗಳೂರು: ನಿರ್ದೇಶಕರೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಜೋಡಿಹಕ್ಕಿ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟ ತಾಂಡವ್‌ ರಾಮ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್‌‌ ಅವರ ಮೇಲೆ ನಟ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಚಂದ್ರಾ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. ಲೈಸೆನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ ಕಾರಣ ತಾಂಡವ್‌‌ ರಾಮ್‌ ನನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ಅರ್ಧಕ್ಕೆ ನಿಲ್ಲಿಸಿದ ಕಾರಣಕ್ಕೆ ಗಲಾಟೆ ಮಾಡಿ ಕೊಲೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಕಮೀಷನರ್ ಬಿ. ದಯಾನಂದ್ ಈ ಪ್ರಕರಣ ಕುರಿತು ಮಾತನಾಡಿದ್ದಾರೆ. ಇದು ನಿನ್ನೆ ಆಗಿರುವ ಘಟನೆ. ಲೈಸೆನ್ಸ್ ಗನ್ ಸೀಜ್ ಮಾಡಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಉದ್ದೇಶ ಪೂರ್ವಕವಾಗಿ ಮಾಡಿರುವುದು ಗೊತ್ತಾಗಿದೆ. ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್​ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com