‘ಭೀಮ’ ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ ‘ಕುಂಭ ಸಂಭವ’ ಚಿತ್ರದಲ್ಲೂ ಮತ್ತೆ ಖಾಕಿ ತೊಟ್ಟು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಮೂಲಕ ಈ ಚಿತ್ರದಲ್ಲಿಯೂ ಪೊಲೀಸ್ ಅಧಿಕಾರಿ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದಲ್ಲಿ ಪ್ರಿಯ, ಅರ್ಜುನ್ ದೇವ್, ಮಧು ಶ್ರೀ, ಶೋಭಿತ, ಕಮಲ್ ಮುಂತಾದವರು ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಟಿ.ಎನ್.ನಾಗೇಶ್ ಅವರು, 2023ರಲ್ಲಿ ಮಂಡ್ಯ ಸುತ್ತಮುತ್ತ ನಡೆದ ಭ್ರೂಣ ಹತ್ಯೆಯ ವಿಷಯವನ್ನಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಕಥೆ ಬರೆಯಲು ಕ್ರಿಶ್ ಜೋಷಿ ಅವರು ಸಹಕಾರ ನೀಡಿದ್ದಾರೆ. ಇದೊಂದು ಸಾಮಾಜಿಕ ಸಮಸ್ಯೆಯ ಸುತ್ತಲ್ಲಿನ ನೈಜ ಘಟನೆ ಆಧಾರಿತ ಚಿತ್ರವಾಗಿದೆ ಎಂದು ಹೇಳಿದರು.
ಚಿತ್ರದಲ್ಲಿ ʼಭೀಮʼ ಖ್ಯಾತಿಯ ಪ್ರಿಯ, ಅರ್ಜುನ್ ದೇವ್, ಮಧು ಶ್ರೀ, ಶೋಭಿತ, ಕಮಲ್ ಮುಂತಾದವರು ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ. ಮಿಲ್ಕಿ ಮೂನ್ ಮೂವೀಸ್ ಲಾಂಛನದಲ್ಲಿ ನಾಗಾನಾಯ್ಕ, ತಾರಾ ನಾಗೇಶ, ಸುನಂದಾ ಹೊಸಪೇಟೆ, ಕಮಲ್, ಡೇವಿಡ್ ರಾಯಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಲ್ಲಿ ಹಾಗೂ ನಿಂಗರಾಜು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಮೂರು ಹಾಡುಗಳಿರುವ ʼಕುಂಭ ಸಂಭವʼ ಚಿತ್ರದಲ್ಲಿ ಮೂರು ಸಾಹಸ ಸನ್ನಿವೇಶಗಳೂ ಇದೆ. ಎಂ.ಎನ್. ಕೃಪಾಕರ್ ಸಂಗೀತ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಸಿದ್ದರಾಜು ಛಾಯಾಗ್ರಹಣ ಹಾಗೂ ಆಕಾಶ್ ಅವರ ಸಂಕಲನ ಈ ಚಿತ್ರಕ್ಕಿದ್ದು, ಕ್ರಿಶ್ ಜೋಶಿ ಸಂಭಾಷಣೆ ಬರೆದಿದ್ದಾರೆ. ಇಂದಿನಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದು ತಿಳಿಸಿದರು,
ನಟಿ ಪ್ರಿಯ ಮಾತನಾಡಿ, ʼಕುಂಭ ಸಂಭವʼ ಚಿತ್ರದ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಯಿತು. ನಮ್ಮ ಸುತ್ತಮುತ್ತ ನಾವು ದಿನನಿತ್ಯ ನೋಡುವ ವಿಷಯವನ್ನಿಟ್ಟಿಕೊಂಡು ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹೆಣ್ಣುಮಕ್ಕಳಿಗೆ ಬಹಳ ಹಿಡಿಸುವ ಕಥೆಯಿದು. ಭ್ರೂಣ ಹತ್ಯೆಯ ಸುತ್ತ ಬೇಕಾದಷ್ಟು ಕಥೆ ಬಂದಿದೆಯಾದರೂ ಇದು ವಿಭಿನ್ನ. ಸಮಸ್ಯೆಗೆ ಪರಿಹಾರವನ್ನು ನಮ್ಮ ಚಿತ್ರದಲ್ಲಿ ಹೇಳಲಾಗಿದೆ. ಈ ಚಿತ್ರದಲ್ಲೂ ನಾನು ಪೊಲೀಸ್ ಅಧಿಕಾರಿ. ಜಾನಕಿ ನನ್ನ ಪಾತ್ರದ ಹೆಸರು ಎಂದು ಹೇಳಿದರು.
ಎಂ.ಎನ್ ಕೃಪಾಕರ್ ಸಂಗೀತ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ, ಸಿದ್ದಾರಾಜು ಛಾಯಾಗ್ರಹಣ ಹಾಗೂ ಆಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ.
Advertisement