
‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದು, ನವೆಂಬರ್‌ನಲ್ಲಿ ಚಿತ್ರ ತೆರೆಕಾಣಲಿದೆ.
ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದಾರೆ. ನವೆಂಬರ್22 ರಂದು ಸಿನಿಮಾ ತೆರೆದೆ ಬರಲಿದೆ ಎಂದು, ಚಿತ್ರತಂಡ ತಿಳಿಸಿದೆ.
ಅನೀಶ್‌ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಜೋಡಿಯಾಗಿದ್ದು, ಚಿತ್ರದಲ್ಲಿ ಹೃತಿಕಾ ಶ್ರೀನಿವಾಸ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಸಂಗೀತ ನೀಡಿದ್ದು, 'ಅಕಿರ' ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ಗುಳ್ಟು ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಸೇರಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನ ಈ ಸಿನಿಮಾಗಿದೆ
Advertisement