
ಟಾಲಿವುಡ್ ನಟಿ ಹಾಗೂ ಬಿಗ್ ಬಾಸ್ ಏಳನೇ ಆವೃತ್ತಿಯ ಸ್ಪರ್ಧಿ ಸುಭಾಶ್ರೀ ರಾಯಗುರು ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ಆಕೆಯ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿತ್ತು.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಗಾರ್ಜುನ ಸಾಗರದ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಭಾಶ್ರೀಗೆ ಯಾವುದೇ ಗಾಯವಾಗಿಲ್ಲ. ಆದರೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಆದರೆ ಬೈಕ್ ನಲ್ಲಿ ತೆರಳುತ್ತಿದ್ದವರು ಮದ್ಯ ಸೇವಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಈ ನಡುವೆ ಶುಭಶ್ರೀ ಅವರ ಕಾರು ಅಪಘಾತಕ್ಕೆ ಸಂಬಂಧಿಸಿದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನು ನೋಡಿದ ಅಭಿಮಾನಿಗಳು ಆತಂಕಗೊಂಡಿದ್ದರು. ಆದರೆ ಶುಭಶ್ರೀಗೆ ಗಾಯವಾಗಿಲ್ಲ ಎಂದು ತಿಳಿದಾಗ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹಾಡಿನ ಚಿತ್ರೀಕರಣಕ್ಕೆ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಈ ಅವಘಡ ಸಂಭವಿಸಿತ್ತು.
ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋ ಮೂಲಕ ಉತ್ತಮ ಮನ್ನಣೆ ಗಳಿಸಿದವರಲ್ಲಿ ಶುಭಶ್ರೀ ರಾಯಗುರು ಅಲಿಯಾಸ್ ಸುಬ್ಬು ಕೂಡ ಒಬ್ಬರು. ಬಿಗ್ ಬಾಸ್ ನ ಏಳನೇ ಸೀಸನ್ ನಲ್ಲಿ ಸ್ಪರ್ಧಿಯಾಗಿ ಬಂದು ತಮ್ಮ ನಟನೆ ಮತ್ತು ಮಾತಿನ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಶಸ್ತಿ ಗೆಲ್ಲದಿದ್ದರೂ ತನ್ನ ಸೌಂದರ್ಯ ಹಾಗೂ ಮುದ್ದಾದ ಮಾತುಗಳಿಂದ ಕಿರುತೆರೆ ಅಭಿಮಾನಿಗಳ ಮನ ಗೆದ್ದಿದ್ದರು.
Advertisement