ಟೀಸರ್ ಹಾಗೂ ಹಾಡುಗಳಿಂದ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿರುವ ''ಭುವನಂ ಗಗನಂ'' ಚಿತ್ರ ನವಂಬರ್ ನಲ್ಲಿ ಬಿಡುಗಡೆಯಾಗಲಿದೆ.
ಇತ್ತೀಚೆಗಷ್ಟೇ ಚಿತ್ರತಂಡ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣಗೊಳಿಸಿತ್ತು. ಇದೀಗ ಸಂಜಿತ್ ಹೆಗ್ಡೆ ಮತ್ತು ಪೃಥ್ವಿ ಭಟ್ ಹಾಡಿರುವ ಪೃಥ್ವಿ ಅಂಬರ ಮತ್ತು ಅಶ್ವತಿ ಒಳಗೊಂಡ ಎರಡನೇ ಹಾಡು ‘ಹೃದಯವೇ ಚೂರು ನಿಲ್ಲು’ ಆನಂದ್ ಆಡಿಯೊದ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಗುಮ್ಮನೇನಿ ವಿಜಯ್ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ಅನಿರುದ್ಧ ಶಾಸ್ತ್ರಿ ಸಾಹಿತ್ಯ ಬರೆದಿದ್ದಾರೆ.
'ಭುವನಂ ಗಗನಂ' ಸಿನಿಮಾ ಲವ್, ರೊಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಅಂಶಗಳುಳ್ಳ ಕಥಾಹಂದರವನ್ನೊಳಗೊಂಡಿದೆ. ನಗರ ಮತ್ತು ಹಳ್ಳಿಯ ಎರಡು ಬ್ಯಾಕ್ಡ್ರಾಪ್ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿ ಅಂಬಾರ್ಗೆ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ.
ಉಳಿದಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ.
ಉದಯ್ ಲೀಲಾ ಅವರ ಕ್ಯಾಮರಾ ಕೈಚಳಕ, ಗುಮ್ಮಿನೇನಿ ವಿಜಯ್ ಅವರ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಅವರ ಸಂಕಲನ ಈ ಸಿನಿಮಾಗಿದೆ.
Advertisement