
ಸದ್ಯದ ಮಟ್ಟಿಗೆ ಕನ್ನಡದಲ್ಲಷ್ಟೇ ಅಲ್ಲ ಇಡೀ ಇಂಡಿಯಾದಲ್ಲೇ ದೊಡ್ಡ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಅಂದರೆ, ಅದು ಟಾಕ್ಸಿಕ್. ಕೆಜಿಎಫ್ ಸರಣಿಯ ಗ್ಲೋಬಲ್ ಸಕ್ಸಸ್ ನಂತರ ರಾಕಿಭಾಯ್ ಮುಂದೇನು ಮಾಡ್ತಾರೆ ಎಂದು ಕಾಯುತ್ತಿರುವ ಫ್ಯಾನ್ಸ್ ಗೆ ಸಿದ್ದವಾಗ್ತಿರೋ ಉತ್ತರವೇ ಈ ಟಾಕ್ಸಿಕ್.
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನೆಮಾದ ಮೊದಲ ಶೆಡ್ಯೂಲ್ ಕಂಪ್ಲೀಟ್ ಆಗಿದ್ದು, ಚಿತ್ರತಂಡ ಇದೀಗ ಮುಂಬೈನತ್ತ ಮುಖ ಮಾಡಿದೆ.
ಇದೀಗ ಎರಡನೇ ಶೆಡ್ಯೂಲ್ ಶೂಟಿಂಗ್ ಗೆ ರಾಕಿಂಗ್ ಸ್ಟಾರ್ ರೆಡಿಯಾಗಿದ್ದು, ಈ ತಿಂಗಳ ಅಂತ್ಯದಿಂದ 45 ದಿನಗಳ ಶೂಟಿಂಗ್ ನಡೆಯಲಿದ್ದು, ಸದ್ಯದಲ್ಲೇ ಮುಂಬೈಗೆ ಹಾರಲಿದ್ದಾರೆಂದು ತಿಳಿದುಬಂದಿದೆ. ಮುಂಬೈನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಕೂಡ ಭಾಗಿಯಾಗಲಿದ್ದಾರೆಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು, ಬೆಂಗಳೂರಿನ ಹೊರವಲಯದಲ್ಲಿ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್‌ನ ಮೊದಲ ಶೆಡ್ಯೂಲ್ ನ ಚಿತ್ರೀಕರಣ ನಡೆಸಲಾಗಿತ್ತು. ಇದೀಗ ಎರಡನೇ ಹಂತದ ಚಿತ್ರೀಕರಣ ಮುಂಬೈನಲ್ಲಿ ನಡೆಯಲಿದ್ದು, ಯಶ್ ಮತ್ತು ಕಿಯಾರಾ ಅಡ್ವಾಣಿ ಅವರು ದೀಪಾವಳಿಯ ನಂತರ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.
ಮೊದಲ ಹಂತದ ಚಿತ್ರೀಕರಣ ಆಕ್ಷನ್ ಸೀಕ್ವೆನ್ಸ್‌ಗಳ ಮೇಲೆ ಹೆಚ್ಚು ಕೇಂದ್ರೀಕೃತವಾಗಿತ್ತಂತೆ. ಅದಕ್ಕಾಗಿ ಬೆಂಗಳೂರಿನಲ್ಲಿ ಸೆಟ್ ಹಾಕಲಾಗಿತ್ತು. ಇದೀಗ ಎರಡನೇ ಸೀಕ್ವೆನ್ಸ್ ಮುಂಬೈನಲ್ಲಿ ನಡೆಲಿದ್ದು ರೂಮ್ಯಾಂಟಿಕ್ ಸೀನ್ ಗಳ ಶೂಟಿಂಗ್ ನಡೆಯಲಿದೆ ಎಂದು ತಿಳಿದುಬಂದಿದೆ.
ಯಶ್ ಮತ್ತು ಕಿಯಾರಾ ನಡುವಿನ ರೋಮ್ಯಾಂಟಿಕ್ ದೃಶ್ಯಗಳನ್ನು ಮುಂಬೈನಲ್ಲಿ ಚಿತ್ರೀಕರಣ ನಡೆಸಲು ನಿರ್ದೇಶಕ ಗೀತು ಮೋಹನ್ ದಾಸ್ ಅವರು ಬಯಸಿದ್ದು,. ಮಳೆ ವಾತಾವರಣ ನೋಡಿಕೊಂಡು ದೀಪಾವಳಿ ಮೊದಲು ಅಥವಾ ನಂತರ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಚಿತ್ರದಲ್ಲಿ ಯಶ್ ಅವರು ಗ್ಯಾಂಗ್‌ಸ್ಟರ್ ಆಗಿ ಅಬ್ಬರಿಸುವ ನಿರೀಕ್ಷೆಯಿದ್ದು, 60-70ರ ದಶಕದ ಕಥೆಯನ್ನು ಚಿತ್ರದಲ್ಲಿ ಹೇಳುವ ಪ್ರಯತ್ನ ನಡೀತಿದೆ. ಡ್ರಗ್ಸ್ ಮಾಫಿಯಾ ಸುತ್ತಾ ಸಿನಿಮಾ ಕಥೆ ಸಾಗುತ್ತದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಅಂದಿನ ಕಾಲಘಟ್ಟ ಕಟ್ಟಿಕೊಡಲು ಚಿತ್ರತಂಡ ಶ್ರಮಿಸುತ್ತಿದೆ, ಟಾಕ್ಸಿಕ್ ಆಕ್ಷನ್-ಪ್ಯಾಕ್ಡ್ ಎಂಟರ್‌ಟೈನರ್ ಚಿತ್ರವಾಗಿದ್ದು, ಚಿತ್ರದ ಮೇಲೆ ಇಡೀ ಭಾರತೀಯ ಚಿತ್ರರಂಗ ಬಹಳಷ್ಟು ಭರವಸೆ ಇಟ್ಟುಕೊಂಡಿದೆ.
ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಯಶ್ ಗೆ ಜೋಡಿಯಾಗಿ ನಟಿಸಿದ್ದರೆ, ನಯನತಾರಾ, ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ. ಹುಮಾ ಖುರೇಷಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಸಿನಿಮಾವನ್ನು ಮಲಯಾಳಿ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದುಸ ಸಿನಿಮಾಕ್ಕೆ ಕೆವಿಎನ್ ಪ್ರೊಡಕ್ಷನ್ಸ್ನವರು ಬಂಡವಾಳ ಹೂಡಿದ್ದಾರೆ. ಸುಮಾರು 300 ಕೋಟಿಗೂ ಹೆಚ್ಚು ಬಜೆಟ್ನಲ್ಲಿ ಸಿನಿಮಾ ಚಿತ್ರೀಕರಣಗೊಳ್ಳುತ್ತಿದೆ.
ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಶಿ ಜೊತೆಗೆ ಅಕ್ಷಯ್ ಒಬೆರಾಯ್, ವಿದೇಶಿ ನಟರಾದ ಬೆನಡಿಕ್ಟ್, ಕೈಲಿ ಪೌಲ್ ಇನ್ನಿತರರು ನಟಿಸುತ್ತಿದ್ದಾರೆ. ಕೆಲವು ವಿದೇಶಿ ತಂತ್ರಜ್ಞರು ಸಹ ಈ ಸಿನಿಮಾಕ್ಕೆ ಜೊತೆಯಾಗಿದ್ದಾರೆ.
Advertisement