Biggboss ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ, ದಿಢೀರ್ ಘೋಷಣೆ!

ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.
ಸುದೀಪ್
ಸುದೀಪ್
Updated on

ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.

ಹೌದು... ಕಿಚ್ಚ ಸುದೀಪ್ ಬಿಗ್ ಬಾಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ. ಈ ವರ್ಷವೇ ಬಿಗ್ ಬಾಸ್ ನಿರೂಪಣೆ ಕುರಿತಂತೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಕಿಚ್ಚ ಸುದೀಪ್ ನಿರೂಪಣೆ ಮಾಡಲು ಒಪ್ಪುತ್ತಿಲ್ಲ. ಹೀಗಾಗಿ ಬೇರೆಯವರನ್ನು ಹಾಕಿಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಕೇಳಿಬಂದಿದ್ದವು. ಆದರೆ ಈ ಸಲ ನಿರೂಪಣೆ ಮಾಡಲು ಒಪ್ಪಿದ್ದ ಇದೀಗ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳುತ್ತಿರುವುದನ್ನು ಸ್ವತಃ ಘೋಷಿಸಿದ್ದಾರೆ.

ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 11 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಸುದೀಪ್
BiggBoss Kannada Season 11: ಬಿಗ್ ಬಾಸ್ ಮನೆಗೆ ಕಾಲಿಟ್ಟ ಸ್ಪರ್ಧಿಗಳು ಇವರೇ ನೋಡಿ!

ಬಿಗ್ ಬಾಸ್ ಕನ್ನಡ ನಿರೂಪಕನಾಗಿ ಇದು ನನ್ನ ಕೊನೆಯ ಆವೃತಿ​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಿಜವಾಗಿಯೂ ನಂಬಿದ್ದೇನೆ. ಈ ಆವೃತಿ ಅತ್ಯುತ್ತಮ ಆಗುವಂತೆ ಮಾಡೋಣ. ಮುಂದೆ ನಿಮ್ಮೆಲ್ಲರನ್ನೂ ನಾನು ಮನರಂಜಿಸುತ್ತೇನೆ ಎಂದು ಸುದೀಪ್​ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com