ನಟಿ ಅಮೂಲ್ಯ ಸಹೋದರ, ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನ

ಸ್ಯಾಂಡಲ್‌ವುಡ್‌ನಲ್ಲಿ ಅಮೂಲ್ಯ ಬಾಲನಟಿ, ನಾಯಕಿಯಾಗಿ ಜನಪ್ರಿಯತೆ ಪಡೆದಿದ್ದರೆ, ಅವರ ಸಹೋದರ ದೀಪಕ್ ಅರಸ್‌ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಕನ್ನಡ ನಟಿ ಅಮೂಲ್ಯ ಅವರ ಸಹೋದರ ಹಾಗೂ ನಿರ್ದೇಶಕ ದೀಪಕ್ ಅರಸ್ ಅವರು ಗುರುವಾರ ವಿಧಿವಶರಾಗಿದ್ದಾರೆ.

ಕಿಡ್ನಿ ವೈಫಲ್ಯದಿಂದಾಗಿ ದೀಪಕ್ ಅರಸ್‌ ಅವರು ನಿಧನರಾಗಿದ್ದಾರೆಂದು ಎಂದು ತಿಳಿದುಬಂದಿದೆ. ಸಂಜೆ 7 ಗಂಟೆ ಸುಮಾರಿಗೆ ಅವರು ಕೊನೆಯುಸಿರು ಎಳೆದಿದ್ದಾರೆಂದು ವರದಿಗಳು ತಿಳಿದುಬಂದಿದೆ.

ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಇದಕ್ಕಾಗಿ ಡಯಾಲಿಸಿಸ್ ಕೂಡ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ದೀಪಕ್ ಅರಸ್ ಅವರ ಸಾವಿನಿಂದಾಗಿ ಅಮೂಲ್ಯ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಅಮೂಲ್ಯ ಬಾಲನಟಿ, ನಾಯಕಿಯಾಗಿ ಜನಪ್ರಿಯತೆ ಪಡೆದಿದ್ದರೆ, ಅವರ ಸಹೋದರ ದೀಪಕ್ ಅರಸ್‌ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಕನ್ನಡದ ‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ಅರಸ್‌ ಆಕ್ಷನ್ ಕಟ್ ಹೇಳಿದ್ದರು

File photo
ನಟಿ ಅಮೂಲ್ಯ ಅವಳಿ ಮಕ್ಕಳ ನಾಮಕರಣ: ದರ್ಶನ್, ಶಿವಣ್ಣ, ಧ್ರುವ ಸರ್ಜಾ ಸೇರಿ ಹಲವು ಗಣ್ಯರು ಭಾಗಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com