ನಂದಕುಮಾರ್ ನಿರ್ದೇಶನದ '1990' ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು
1990 ಸಿನಿಮಾ ಸ್ಟಿಲ್
1990 ಸಿನಿಮಾ ಸ್ಟಿಲ್
Updated on

ಕನ್ನಡ ಚಲನಚಿತ್ರೋದ್ಯಮವು ಪ್ಯಾನ್-ಇಂಡಿಯಾ ಮಾರುಕಟ್ಟೆಯತ್ತ ಹೆಚ್ಚು ಗಮನ ಹರಿಸುತ್ತಿದೆ. ಅನೇಕ ಚಲನಚಿತ್ರಗಳು ಬಹು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿವೆ. ಈ ಪಟ್ಟಿಗೆ ಬಹು ನಿರೀಕ್ಷಿತ ಸೇರ್ಪಡೆಯೆಂದರೆ 1990 ಸಿನಿಮಾ, ಇದು ನಂದಕುಮಾರ್ ಸಿಎಂ ಅವರ ಚೊಚ್ಚಲ ನಿರ್ದೇಶದ ಸಿನಿಮಾವಾಗಿದೆ. ಅರುಣ್‌ ಮತ್ತು ರಾಣಿ ವರದ್‌ ಜೋಡಿಯಾಗಿ ನಟಿಸಿರುವ ಸಿನಿಮಾ ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಥಿಯೇಟರ್‌ಗೆ ಬರಲಿದೆ.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು ಪ್ರಮುಖ ಕಾರಣ ಚಿತ್ರದ ಛಾಯಾಗ್ರಹಕ ಹಾಲೇಶ್, ಸಂಗೀತ ನಿರ್ದೇಶಕ ಮಹಾರಾಜ, ಸಂಕಲನಕಾರ ಕೃಷ್ಣ ಹಾಗೂ ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್ ಹಾಗೂ ಚಿತ್ರದ ನಾಯಕ ಅರುಣ್. ಇವರೆಲ್ಲರು ನನ್ನ ಜೊತೆಗೆ ಕೈಜೋಡಿಸಿದ್ದು ನಾನು ಈ ಚಿತ್ರ ನಿರ್ದೇಶನ ಮಾಡಲು ಕಾರಣವಾಯಿತು ಎಂದು ನಂದಕುಮಾರ್ ತಿಳಿಸಿದರು.ಇವರೆಲ್ಲರಿಗೂ ಹಾಗೂ ನಿರ್ಮಾಣ ಸಂಸ್ಥೆ ಮನಸ್ಸು ಮಲ್ಲಿಗೆ ಕಂಬೈನ್ಸ್ ಗೆ ನಾನು ಆಬಾರಿ. ಇನ್ನು “1990” ತೊಂಭತ್ತರ ದಶಕದಲ್ಲಿ ನಡೆಯುವ ಪ್ರೇಮಕಥೆ. ಅರುಣ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಕಷ್ಟು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಚಿತ್ರದ ಶೀರ್ಷಿಕೆಯನ್ನು “1990s” ಎಂದು ಇಡಲಾಗಿದೆ ಎಂದರು ನಿರ್ದೇಶಕ ನಂದಕುಮಾರ್.

ರಂಗಭೂಮಿ ಕಲಾವಿದನಾಗಿ ಹತ್ತುವರ್ಷಗಳ ಅನುಭವವಿರುವ ನನಗೆ ಹಿರಿತೆರೆತಲ್ಲಿ ಇದು ಮೊದಲ ಚಿತ್ರ. ನಂದಕುಮಾರ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಚಿತ್ರ ಹಿಡಿಸುವ ನಂಬಿಕೆ ಇದೆ‌. ಈ ಚಿತ್ರದಲ್ಲಿ ನನ್ನದು ಮುಗ್ದ ಪ್ರೇಮಿಯ ಪಾತ್ರ ಎಂದು ತಿಳಿಸಿದ ನಾಯಕ ಅರುಣ್, ನಾನು ಹಿರಿಯ ಸಂಕಲನಕಾರ ಜನಾರ್ದನ್ ಅವರ ಪುತ್ರ ಎಂದರು.

1990 ಸಿನಿಮಾ ಸ್ಟಿಲ್
ಸೆಪ್ಟೆಂಬರ್ 6ಕ್ಕೆ 'ಡಾಲರ್ಸ್ ಪೇಟೆ' ಸಿನಿಮಾ ಬಿಡುಗಡೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com