ಪ್ರಮೋದ್ ಶೆಟ್ಟಿ ಅಭಿನಯದ 'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ' ಸಿನಿಮಾ ಶೂಟಿಂಗ್ ಮುಕ್ತಾಯ

ಅನೀಶ್ ಶರ್ಮಾ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು
'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ ಸಿನಿಮಾ ಸ್ಟಿಲ್
'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ ಸಿನಿಮಾ ಸ್ಟಿಲ್
Updated on

ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದ ಹಾಸ್ಯ ಕೌಟುಂಬಿಕ ಕಥೆ ಲಾಫಿಂಗ್ ಬುದ್ಧ ಇತ್ತೀಚೆಗೆ ರಿಲೀಸ್ ಆಗಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.ಈ ನಡುವೆ ಪ್ರಮೋದ್ ಶೆಟ್ಟಿ ತಮ್ಮ ಮುಂದಿನ ಸಿನಿಮಾಗೆ ಸಜ್ಜಾಗುತ್ತಿದ್ದಾರೆ.

ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ ಎಂಬ ಟೈಟಲ್ ನ ಈ ಚಿತ್ರದಲ್ಲಿ ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಮತ್ತು ಕಾಂತಾರ ಚಿತ್ರಗಳ ಪಾತ್ರಗಳಿಗೆ ಹೆಸರಾದ ಪ್ರಮೋದ್ ಮತ್ತೊಂದು ಕುತೂಹಲಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅನೀಶ್ ಶರ್ಮಾ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು. 'ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ' ಸಿನಿಮಾವನ್ನು ಅನೀಶ್ ಎಸ್ ಶರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಇವರು 'ವಡ್ಡಾರಾಧಕ', 'ಶಬರಿ'ಯಂತಹ ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ತಮ್ಮೂರಿನ ಕಥೆಗಳು ಎಲ್ಲಾ ಕಡೆಗೂ ತಲುಪಬೇಕು ಅನ್ನುವುದೇ ಆಸೆ. ಹಾಗಾಗಿ ಇಂತಹದ್ದೇ ಇನ್ನೊಂದು ಕಥೆಯನ್ನು ತೆರೆಮೇಲೆ ತರುವುದಕ್ಕೆ ಹೊರಟಿದ್ದಾರೆ.

ಈ ವಿಶಿಷ್ಠ ಕಥೆಯನ್ನು ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮದೇ ಗನ್ನಿ ಬ್ಯಾಗ್ ಸಂಸ್ಥೆ ಮೂಲಕ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸದಾ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುವ ಈ ಯುವ ಸಂಸ್ಥೆ ಈಗ ಪ್ರಮೋದ್ ಶೆಟ್ಟಿಯನ್ನು ನಾಯಕರನ್ನಾಗಿ ಮಾಡುವ ಮೂಲಕ 'ಕರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ' ಹೇಳುವುದಕ್ಕೆ ಹೊರಟಿದೆ. ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಒಂದು ಹಳ್ಳಿಯಲ್ಲಿ ಚಿತ್ರವನ್ನು ಚಿತ್ತರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸುಮತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರಕ್ಕಿದೆ. ಗನ್ನಿ ಬ್ಯಾಗ್ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ ಸಿನಿಮಾ ಸ್ಟಿಲ್
ಪ್ರಮೋದ್ ಶೆಟ್ಟಿ ನಟನೆಯ 'ಲಾಫಿಂಗ್ ಬುದ್ದ' ರಿಲೀಸ್ ಗೆ ಹೊಸ ಡೇಟ್ ಫಿಕ್ಸ್!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com