ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಲೈಂಗಿಕ ಕಿರುಕುಳ ಮತ್ತು ಇತರ ದೌರ್ಜನ್ಯಗಳ ಕುರಿತು ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಕೆಎಫ್‌ಸಿಸಿ) ಸೆಪ್ಟೆಂಬರ್ 16 ರಂದು ಮಹಿಳಾ ಕಲಾವಿದರ ಸಭೆ ಕರೆಯಲಾಗಿದೆ ಎಂದು ಪದಾಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ(ಕೆಎಫ್‌ಸಿಸಿ) ಮನವಿ ಮಾಡಿದ ನಂತರ ಈ ಸಭೆ ಕರೆಯಲಾಗಿದೆ.
ಈ ಕುರಿತು ಪಿಟಿಐಗೆ ಪ್ರತಿಕ್ರಿಯಿಸಿದ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್, “ರಾಜ್ಯ ಮಹಿಳಾ ಆಯೋಗವು ಸೆಪ್ಟೆಂಬರ್ 13 ರೊಳಗೆ ಸಭೆ ಕರೆಯುವಂತೆ ಕೇಳಿದೆ. ಆದರೆ ಇದು ಹಬ್ಬದ ಸಮಯ ಮತ್ತು ಜನರು ಚಿತ್ರೀಕರಣದಲ್ಲಿ ತೊಡಗಿರುವ ಕಾರಣ ಸೆಪ್ಟೆಂಬರ್ 16 ರಂದು ತಾತ್ಕಾಲಿಕವಾಗಿ ಸಭೆಗೆ ಕರೆದಿದ್ದೇವೆ ಎಂದರು.
ಸೋಮವಾರ ಸಭೆ ಯಾವಾಗ ನಡೆಸಬೇಕು ಎಂಬುದರ ಬಗ್ಗೆ ಅವರಿಗೆ ಖಚಿತವಾಗಿ ತಿಳಿಯುತ್ತದೆ. "ಆದರೆ ಮುಂದಿನ ಕ್ರಮ ಏನು ಎಂಬುದರ ಕುರಿತು ಒಮ್ಮತಕ್ಕೆ ಬರಲು ನಾವು ಖಂಡಿತವಾಗಿಯೂ ಸಭೆ ನಡೆಸುತ್ತೇವೆ" ಎಂದು ಸುರೇಶ್ ಅವರು ತಿಳಿಸಿದ್ದಾರೆ.
ಏತನ್ಮಧ್ಯೆ, ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(FIRE) ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, "ನಮ್ಮ ನ್ಯಾಯಯುತ ಬೇಡಿಕೆಗೆ ಪ್ರತಿಕ್ರಿಯೆಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿರುವುದಾಗಿ ಹೇಳಿದೆ.
ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂಬ ಬೇಡಿಕೆಯನ್ನು ಬೆಂಬಲಿಸಿದ ಬಿಜೆಪಿಯ ಮಂಜುಳಾ ಸಿ ಮತ್ತು ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅವರನ್ನುFIRE ಶ್ಲಾಘಿಸಿದೆ.
Advertisement