ಬಾಲಿವುಡ್ ತಾರಾ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಹೆಣ್ಣುಮಗುವನ್ನು ಸ್ವಾಗತಿಸಿದ್ದಾರೆ ಎಂದು ಐಎನ್ ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ನಟಿ ಗುಳಿಕೆನ್ನೆ ಬೆಡಗಿ ದೀಪಿಕಾ ಹೆಣ್ಣುಮಗವಿಗೆ ಜನ್ಮ ನೀಡಿದ್ದಾರೆ.
ಶನಿವಾರ ಮುಂಬೈನ ಗಿರ್ಗಾಂವ್ ಪ್ರದೇಶದ H.N. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹೆರಿಗೆಗೆ ಮುನ್ನ, ಶುಕ್ರವಾರ, ದಂಪತಿ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಫೆಬ್ರವರಿಯಲ್ಲಿ ದೀಪಿಕಾ ತಾವು ಗರ್ಭಿಣಿಯೆಂದು ಘೋಷಿಸಿದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು. ಆದರೆ ನಿಗದಿಗಿಂತ 20 ದಿನ ಮೊದಲೇ ದೀಪಿಕಾ ಜನ್ಮ ನೀಡಿದ್ದಾರೆ.
Advertisement