ನಟ ಧನ್ವೀರ್ ಅಭಿನಯದ ʻಹಯಗ್ರೀವʼ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್‌ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಧನ್ವೀರ್ ಹುಟ್ಟಹಬ್ಬ ಪ್ರಯುಕ್ತ ಚಿತ್ರತಂಡ ಚಿತ್ರದ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಹಯಗ್ರೀವ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ “ಹಯಗ್ರೀವ” ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಸಿನಿಮಾದ ನಾಯಕ ಧನ್ವೀರ್ ಗೆ ನಾಯಕಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ. ಸಾಧು ಕೋಕಿಲ, ರಮೇಶ್ ಭಟ್, ಶರತ್ ಲೋಹಿತಾಶ್ವ, ಶೋಭ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ರವಿವರ್ಮ, ಡಿಫರೆಂಟ್ ಡ್ಯಾನಿ, ಅರ್ಜುನ್ ರಾಜ್ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಭೂಷಣ್ ಅವರ ನೃತ್ಯ ನಿರ್ದೇಶನವಿದೆ.
Advertisement