ಕಣಂಜಾರು ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ನವೆಂಬರ್'ನಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಜ್ಜುಗೊಳ್ಳುತ್ತಿದೆ.
ಚಿತ್ರತಂಡ ಸದ್ಯ ಪ್ರಮೋಷನ್ ಚಟುವಟಿಕೆಯಲ್ಲಿ ಬಿಜಿಯಾಗಿದ್ದು, ಚಿತ್ರದ ಶೀರ್ಷಿಕೆ, ಮೋಷನ್ ಪೋಸ್ಟರ್ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ. ಚಿತ್ರದ ಟೀಸರ್ ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ 1.6 ಮಿಲಿಯನ್ ವೀಕ್ಷಣೆ ಪಡೆದಿದೆ.
ಇತ್ತೀಚೆಗೆ ಬಿಡುಗಡೆಯಾದ 'ಪ್ರೇಮ ಶೃಂಗಾರದ' ಹಾಡು ಪ್ರೇಕ್ಷಕರ ಮನ ಗೆದ್ದಿದ್ದು, ಪ್ರಸ್ತುತ ಚಿತ್ರ ತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.
ಈ ಚಿತ್ರವನ್ನು ಆರ್ ಬಾಲಚಂದ್ರ ಅವರು ನಿರ್ದೇಶಿಸಿ, ನಿರ್ಮಿಸಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಅಪೂರ್ವ ಸಿನಿಮಾ ಖ್ಯಾತಿಯ ನಟಿ ಅಪೂರ್ವಾ ನಾಯಕಿಯಾಗಿ ಮಿಂಚಿದ್ದಾರೆ.
ಚಿತ್ರದ ಕುರಿತು ಮಾತನಾಡಿರುವ ನಟಿ ಅಪೂರ್ವ ಅವರು, ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆಯಾದಾಗಿನಿಂದಲೂ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ನಿರೀಕ್ಷೆಗಳೂ ಹೆಚ್ಚಾಗಿದೆ. ಕಣಂಜಾರು ಚಿತ್ರವನ್ನು ಜನ ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಟೀಸರ್ ಮತ್ತು ಹಾಡಿಗೆ ಪ್ರೇಕ್ಷಕರ ಪ್ರತಿಕ್ರಿಯೆ ಅದ್ಭುತವಾಗಿದೆ. ‘ಪ್ರೇಮ ಶೃಂಗಾರ’ ಹಾಡು ಪ್ರೇಕ್ಷಕರ ಮನಗೆದ್ದಿದ್ದು, ಮಿಲಿಯನ್‌ಗಟ್ಟಲೆ ಜನರು ವೀಕ್ಷಣೆ ಮಾಡಿದ್ದಾರೆ. ಇದು ನಮ್ಮ ತಂಡಕ್ಕೆ ಉತ್ತಮ ಸ್ಥೈರ್ಯವನ್ನು ನೀಡಿದೆ ಎಂದು ಬಾಲಚಂದ್ರ ಅವರು ಹೇಳಿದ್ದಾರೆ.
ಆರ್ ಪಿ ಫಿಲ್ಮ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕಣಂಜಾರು ಚಿತ್ರಕ್ಕೆ ಶಶಾಂಕ್ ಶೇಷಗಿರಿ ಅವರ ಸಂಗೀತ, ವೆಂಕಿ ಉದ್ವಿ ಅವರ ಸಂಕಲನ ಮತ್ತು ಮಂಜುನಾಥ್ ಹೆಗ್ಡೆ ಅವರ ಛಾಯಾಗ್ರಹಣವಿದೆ
Advertisement