ಕೂಲಿ ಚಿತ್ರದಲ್ಲಿ ರಚಿತಾರಾಮ್ ಅವರು ರಜನಿಕಾಂತ್ ಅವರೊಂದಿಗೆ ನಟಿಸುತ್ತಿದ್ದು, ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಾರೆ ಹಾಗೂ ಚಿತ್ರದ ಕುರಿತು ಚೆನ್ನೈಗೆ ಭೇಟಿ ನೀಡಿದ್ದಾರೆಂದು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಈ ಚಿತ್ರಕ್ಕೆ ಸಂಬಂಧಿಸಿದ ಮತ್ತೊಂದು ಕುತೂಹಲಕಾರಿ ಅಪ್‌ಡೇಟ್'ವೊಂದು ಸಿಕ್ಕಿದೆ.
ಚಿತ್ರದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಖಳನಾಯಕಿ ಪಾತ್ರ ಮಾಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಚಿತ್ರದಲ್ಲಿ ರಚಿತಾ ರಾಮ್ ನಟಿಸುತ್ತಿರುವುದನ್ನು ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಆದರೆ, ಮೂಲಗಳು ರಚಿತಾ ರಾಮ್ ಅವರು ಖಳನಾಯಕಿಯಾಗಿ ನಟಿಸಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ರಚಿತಾ ರಾಮ್ ಅವರು ಸ್ಯಾಂಡಲ್ ವುಡ್ ನಲ್ಲಿ ಈವರೆಗೂ ನಾಯಕಿ ಪಾತ್ರದಲ್ಲಿ ನಟಿಸಿ, ಜನರ ಮನಗೆದ್ದಿದ್ದು, ಇದೀಗ ಖಳನಾಯಕಿ ಪಾತ್ರದಲ್ಲಿ ನಟಿಸುವ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ರಚಿತಾ ರಾಮ್ ಅವರ ಈ ಹೊಸ ಪ್ರಯತ್ನ ಪ್ರೇಕ್ಷಕರಲ್ಲಿ ಕುತೂಹಲಗಳನ್ನು ಮೂಡಿಸಿದೆ. ಈ ನಡುವೆ ಚಿತ್ರದಲ್ಲಿ ನಟಿ ರಮ್ಯಾ ಕೃಷ್ಣ ಅವರೂ ಕೂಡ ನಟಿಸುತ್ತಿದ್ದಾರೆಂದು ತಿಳಿದುಬಂದಿದೆ.
ನಟಿ ರಚಿತಾ ರಾಮ್ ಅವರು ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಅವರೊಂದಿಗೆ ನಟಿಸಿ ಹಿಟ್ ಚಿತ್ರಗಳನ್ನು ನೀಡಿದ್ದು, ಇದೀಗ ತಮಿಳು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ರಚಿತಾ ಅವರು ನಾಗಶೇಖರ್ ಅವರ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ.
ಕೂಲಿ ಚಿತ್ರ ರಜನಿಕಾಂತ್ ಅವರ 171 ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೊದಲು ತಲೈವಾ 171 ಎನ್ನುವ ಶೀರ್ಷಿಕೆ ಇಡಲಾಗಿತ್ತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ.
Advertisement