ಪುನೀತ್ ರಾಜ್ಕುಮಾರ್, ಸುದೀಪ್ ಸೇರಿದಂತೆ ದಕ್ಷಿಣ ಭಾರತದ ಅನೇಕ ಸ್ಟಾರ್ಗಳಿಗೆ ಕೊರಿಯೋಗ್ರಫಿ ಮಾಡಿರುವ ತೆಲುಗಿನ ಹೆಸರಾಂತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.
ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ 21 ವರ್ಷದ ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಸೈಬರಾಬಾದ್ ರಾಯದುರ್ಗಂ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ.
ಜಾನಿಯೊಂದಿಗೆ ಹಲವು ಚಿತ್ರಗಳಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಯುವತಿ, ಕಳೆದ ಕೆಲವು ತಿಂಗಳುಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಚೆನ್ನೈ, ಮುಂಬೈ ಮತ್ತು ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಲ್ಲಿ ಒಟ್ಟಿಗೆ ಚಿತ್ರೀಕರಣದ ಸಮಯದಲ್ಲಿ ತನ್ನ ಮೇಲೆ ಅನೇಕ ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಹೈದರಾಬಾದ್ನ ನರಸಿಂಗಿಯಲ್ಲಿರುವ ತನ್ನ ಸ್ವಂತ ಮನೆಯಲ್ಲಿ ಜಾನಿ ಹಲವು ಬಾರಿ ತನ್ನನ್ನು ನಿಂದಿಸಿರುವುದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ.
ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 376 (ಅತ್ಯಾಚಾರ) ಕ್ರಿಮಿನಲ್ ಬೆದರಿಕೆ (506) ಮತ್ತು ಸ್ವಯಂ ಪ್ರೇರಿತವಾಗಿ ಅಪಮಾನ ಉಂಟು ಮಾಡುವುದು (323) ರ ಕಲಂ (2) ಮತ್ತು (n) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜಾನಿ ಮಾಸ್ಟರ್ ರಾಮ್ ಚರಣ್, ಜೂನಿಯರ್ ಎನ್ ಟಿಆರ್, ಚಿರಂಜೀವಿ, ದಳಪತಿ ವಿಜಯ್, ಧನುಷ್ ಮತ್ತು ಪವನ್ ಕಲ್ಯಾಣ್ ಸೇರಿದಂತೆ ಅನೇಕ ದೊಡ್ಡ ಸೆಲೆಬ್ರಿಟಿಗಳೊಂದಿಗೆ ಕೆಲಸ ಮಾಡಿದ್ದಾರೆ. ಈ ಆರೋಪದ ಬಗ್ಗೆ ನೃತ್ಯ ನಿರ್ದೇಶಕರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Advertisement