ಲೈಂಗಿಕ ದೌರ್ಜನ್ಯ ಪ್ರಕರಣ: ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ
ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಬಂಧಿಸಲಾಗಿದೆ. ಯುವತಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.
ಯುವತಿಯ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.
ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ