ಶೀರ್ಷಿಕೆ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ಪ್ರಕರಣ ತನಿಖಾ ಹಂತದಲ್ಲಿದೆ ಚಿತ್ರ ಆಕ್ಟೋಬರ್ 18ಕ್ಕೆ ಬಿಡುಗಡೆಯಾಗುತ್ತಿದೆ.
ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಸಂದರ್ಭದಲ್ಲಿ ಚಿತ್ರ ತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.
ಚಿತ್ರ ಕುರಿತು ಮಾತನಾಡಿರುವ ನಿರ್ಮಾಪಕ ಚಿಂತನ್ ಕಂಬಣ್ಣ ಅವರು, ನೈಜ ಜೀವನ ಕಥೆಗೆ ಚಿತ್ರಕಥೆ ಹೊಂದಿಕೆಯಾಗುವಂತಿದೆ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಗಳಿದೆ. ನಮ್ಮ ತಂದ ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದು, ಆಧುನಿಕ ಯುಗದ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಕಥೆ ಹೆಣೆಯಲಾಗಿದೆ ಎಂದು ಹೇಳಿದ್ದಾರೆ.
ಚಿತ್ರಕ್ಕೆ ಚಿಂತನ್ ಕಂಬಣ್ಣ ಬಂಡವಾಳ ಹೂಡಿದ್ದು, ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಚಿತ್ರ ನಿರ್ಮಾಣ ಮಾಡಿರುವ ಚಿಂತನ್ ಅವರು ಸಿನಿಮಾದಲ್ಲಿ ಒಂದು ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಹೀನ್ ಕುಬೇರ್, ಮುತ್ತುರಾಜ್ ಟಿ, ಗಗನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ವಿ.ಎಫ್.ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ಹೊತ್ತಿದ್ದಾರೆ.
Advertisement