ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ ದರ್ಶನ್ ಅಭಿನಯದ 'ಕಾಟೇರ': 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ರಿಲೀಸ್ ಆದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾದ ಸಿನಿಮಾ 100 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿರುವುದಕ್ಕೆ ದರ್ಶನ್ ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ.
ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ದಿನದಿಂದಲೂ ಕಾಟೇರ ಬಾಕ್ಸ್ ಆಫೀಸ್ನಲ್ಲಿ ಮುನ್ನುಗ್ಗುತ್ತಲೇ ಸಾಗಿದ್ದು, ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
ಡಿಸೆಂಬರ್ 29ರಂದು ಚಿತ್ರ ರಾಜ್ಯದಾದ್ಯಂತ ತೆರೆಕಂಡಿದ್ದು, ಚಿತ್ರ ಬಿಡುಗಡೆಯಾದ ಮೊದಲನೇ ದಿನ ಕಾಟೇರ 19.79 ಕೋಟಿ ರೂ. ಗಳಿಸಿತ್ತು. ಎರಡನೇ ದಿನ 17.35 ಕೋಟಿ ರೂ. ಗಳಿಸಿತ್ತು. ಮೂರನೇ ದಿನಕ್ಕೆ ಬರೋಬ್ಬರಿ 20.94 ಕೋಟಿ ರೂ. ಸಂಗ್ರಹಿಸಿದೆ. ನಾಲ್ಕನೇ ದಿನ 18.26 ಕೋಟಿ ರೂ. ಗಳಿಸಿತ್ತು. ಆರನೇ ದಿನಕ್ಕೆ 9.78 ಕೋಟಿ ರೂ. ಗಳಿಸುವ ಮೂಲಕ ಚಿತ್ರವು ಒಟ್ಟು 95.36 ಕೋಟಿ ರೂ. ಸಂಗ್ರಹಿಸಿತ್ತು.
ಇದೀಗ ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ಬರೋಬ್ಬರಿ 104.58 ಕೋಟಿ ರೂ. ಗಳಿಸುವ ಮೂಲಕ ಕಾಟೇರ ಚಿತ್ರ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.
ಚಿತ್ರದಲ್ಲಿ ಆರಾಧನಾ ರಾಮ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


