ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ: ಕಂಬನಿ ಮಿಡಿದ ಕನ್ನಡ ಚಿತ್ರರಂಗ

ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3–4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ.
bank janardhan
ಬ್ಯಾಂಕ್ ಜನಾರ್ಧನ್
Updated on

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ.

ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ಧನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಜನಾರ್ಧನ್ ಮಿಂಚಿದ್ರು. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಉಪೇಂದ್ರ ನಿರ್ದೇಶನದ ಶ್ ಸಿನಿಮಾ, ತರ್ಲೆ ನಾನ್ ಮಗ , ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಗೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯಾಂಕ್ ಜ​ನಾರ್ಧನ್ ಗಮನ ಸೆಳೆದಿದ್ದಾರೆ.

ಕನ್ನಡ ಕಿರುತೆರೆಯ 'ಪಾಪ ಪಾಂಡು', 'ರೋಬೋ ಫ್ಯಾಮಿಲಿ' ಜನಪ್ರಿಯ ಧಾರಾವಾಹಿಗಳಲ್ಲಿ ಜನಾರ್ಧನ್ ನಟಿಸಿದ್ದರು.

ಜನಾರ್ಧನ್ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಮನೆಗೆ ತೆಗೆದುಕೊಂಡು ಹೋಗಿ ನಂತರ ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗುವುದು. ಅಲ್ಲಿ ಚಲನಚಿತ್ರೋದ್ಯಮ ಮತ್ತು ಕಲಾ ಜಗತ್ತಿನ ಸದಸ್ಯರು, ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ. ಸಂಜೆ ಪೀಣ್ಯದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com