ಬಾಲಕಿಯ ಹತ್ಯೆ ಆರೋಪಿ ಎನ್ಕೌಂಟರ್: ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ನಟ ಧ್ರುವ ಸರ್ಜಾ

ಹುಬ್ಬಳ್ಳಿಯಲ್ಲಿ ಮಗುವನ್ನು ಅತ್ಯಾಚಾರ ಮಾಡಿ ಕೊಂದವನನ್ನು ಎನ್ ಕೌಂಟರ್ ಮಾಡಿದ ಪಿ. ಎಸ್. ಐ ಅನ್ನಪೂರ್ಣ ಮತ್ತು ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯಕ್ತರಾದ ಶ್ರೀ ಎನ್. ಶಶಿಕುಮಾರ ಅವರ ತಂಡಕ್ಕೆ ಅಭಿನಂದನೆಗಳು.
ಪೊಲೀಸ್ ಅಧಿಕಾರಿಗಳು ಹಾಗೂ ನಟ ಧ್ರುವ ಸರ್ಜಾ.
ಪೊಲೀಸ್ ಅಧಿಕಾರಿಗಳು ಹಾಗೂ ನಟ ಧ್ರುವ ಸರ್ಜಾ.
Updated on

ಬೆಂಗಳೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ ಆರೋಪಿ ಎನ್ಕೌಂಟರ್'ನಲ್ಲಿ ಹತನಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನಟ ಧ್ರುವ ಸರ್ಜಾ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್'ನಲ್ಲಿ ಟ್ವೀಟ್ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಮಗುವನ್ನು ಅತ್ಯಾಚಾರ ಮಾಡಿ ಕೊಂದವನನ್ನು ಎನ್ ಕೌಂಟರ್ ಮಾಡಿದ ಪಿ. ಎಸ್. ಐ ಅನ್ನಪೂರ್ಣ ಮತ್ತು ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯಕ್ತರಾದ ಶ್ರೀ ಎನ್. ಶಶಿಕುಮಾರ ಅವರ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.

‘ಭಾನುವಾರ ಬೆಳಿಗ್ಗೆ 10.40ರ ಸುಮಾರಿಗೆ ವಿಜಯನಗರದಲ್ಲಿ ಐದು ವರ್ಷದ ಮಗು ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿತ್ತು. ನಂತರ, ಮಗು ನಾಪತ್ತೆಯಾದ ಸ್ಥಳದ ಎದುರಿರುವ ಶೆಡ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು.

ಬಿಹಾರ ಪಾಟ್ನಾದ ನಿವಾಸಿಯಾದ ಆರೋಪಿ ರಿತೀಶ ಕುಮಾರ್ ಭಾನುವಾರ ಬೆಳಿಗ್ಗೆ 10.40ರ ಸುಮಾರು ವಿಜಯನಗರದ ವಾಸವಾಗಿದ್ದ ಬಾಲಕಿಗೆ ತಿಂಡಿ ತಿನಿಸುಗಳನ್ನು ನೀಡುವುದಾಗಿ ಪುಸಲಾಯಿಸಿ ಕರೆದಿದ್ದಾನೆ. ನಂತರ ಅವಳನ್ನು ಎತ್ತಿಹಾಕಿಕೊಂಡು ಎದುರಿನ ಮನೆಯಲ್ಲಿರುವ ಶೆಡ್‌ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆ ಕೂಗಿಕೊಂಡಾಗ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದಾಗ, ಕೃತ್ಯದ ಕುರಿತು ಮಾಹಿತಿ ನೀಡಿದ್ದ. ಆದರೆ, ತನ್ನ ವಿಳಾಸ ಹಾಗೂ ಗುರುತಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ಆರೋಪಿ ‘ಬಿಹಾರ ಮೂಲದವು ಎನ್ನಲಾಗಿದ್ದು, ವಿವಿಧ ಊರುಗಳಲ್ಲಿ ಕೆಲಸ ಮಾಡುತ್ತಿದ್ದು, ಹುಬ್ಬಳ್ಳಿಯಲ್ಲೂ ಕೆಲಸ ಮಾಡುತ್ತ, ತಾರಿಹಾಳ ಸೇತುವೆ ಬಳಿಯ ಹಳೇ ಶೆಡ್‌ನಲ್ಲಿ ವಾಸಿಸುತ್ತಿರುವುದಾಗಿ ತಿಳಿಸಿದ್ದ. ಅವನ ಜೊತೆ ಯಾರಿದ್ದಾರೆಂದು ತಿಳಿದುಕೊಳ್ಳಲು, ಅವನನ್ನು ಸ್ಥಳಕ್ಕೆ ಕರೆದುಕೊಂಡು ಹೋದಾಗ ಎನ್‌ಕೌಂಟರ್‌ ನಡೆದಿತ್ತು ಎನ್ನಲಾಗಿದೆ.

ಈ ನಡುವೆ ಆರೋಪಿ ಎನ್‌ಕೌಂಟರ್‌ನಿಂದ ಮೃತಪಟ್ಟ ವಿಷಯ ತಿಳಿದ ಸಾರ್ವಜನಿಕರು, ಬಾಲಕಿ ಸಾವಿನ ಕುರಿತು ನಡೆಸುತ್ತಿದ್ದ ಪ್ರತಿಭಟನೆ ಕೈಬಿಟ್ಟು ಕೆಎಂಸಿ ಆಸ್ಪತ್ರೆ ಎದುರು ಸಂಭ್ರಮಿಸಿದರು. ಪೊಲೀಸ್ ಕಮಿಷನರ್ ಶಶಿಕುಮಾರ್‌ ಅವರಿಗೆ ಜೈಕಾರ ಹಾಕಿದರು.

ಪೊಲೀಸ್ ಅಧಿಕಾರಿಗಳು ಹಾಗೂ ನಟ ಧ್ರುವ ಸರ್ಜಾ.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! Video

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com