ಮನೆಗೆ ನುಗ್ಗಿ ಹೊಡೆಯುತ್ತೇವೆ, ಕಾರಿನಲ್ಲಿ ಬಾಂಬ್‌ ಇಟ್ಟು ಸ್ಫೋಟಿಸುತ್ತೇವೆ: ಸಲ್ಮಾನ್ ಖಾನ್‌ಗೆ ಹೊಸ ಬೆದರಿಕೆ, ಪ್ರಕರಣ ದಾಖಲು

ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್‌ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ.
Salman Khan
ಸಲ್ಮಾನ್ ಖಾನ್
Updated on

ಮುಂಬಯಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಜೀವ ಭಯದಲ್ಲೇ ದಿನದೂಡುವಂತಾಗಿದೆ. ಈಗಾಗಲೇ ಎರಡ್ಮೂರು ಬಾರಿ ಸಲ್ಲುಗೆ ಜೀವ ಬೆದರಿಕೆ ಬಂದಿದೆ. ಇದೀಗ ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ ಹಾಕಿ ಸಂದೇಶವೊಂದು ಮುಂಬೈ ಸಂಚಾರ ಪೊಲೀಸರಿಗೆ ಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಭಾನುವಾರ(ಏಪ್ರಿಲ್ 13) ಸಂದೇಶವೊಂದು ಬಂದಿದೆ. ಅದನ್ನು ಕಳುಹಿಸಿದವರು ನಟ ಸಲ್ಮಾನ್ ಖಾನ್ ಕಾರನ್ನು ಸ್ಫೋಟಿಸುವುದಾಗಿ ಹಾಗೂ ಆತನ ನಿವಾಸಕ್ಕೆ ನುಗ್ಗಿಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್‌ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ವರ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಬೆದರಿಕೆಯ ಹೊಣೆಯನ್ನೂ ಯಾರೂ ಹೊತ್ತುಕೊಂಡಿಲ್ಲ. ಸಲ್ಮಾನ್‌ ಖಾನ್‌ ಅವರಾಗಲಿ, ಅವರ ಕುಟುಂಬಸ್ಥರಾಗಲಿ ಯಾವುದೇ ಪ್ರತಿಕ್ರಿಯೆ ಸಹ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.

ಈ ಹಿಂದೆಯೂ ಸಲ್ಮಾನ್‌ಗೆ ಹಲವು ಬಾರಿ ಬೆದರಿಕೆಗಳು ಬಂದಿವೆ. ಗ್ಯಾಂಗ್‌ಸ್ಟರ್‌ ​​ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನಿಂ‌ದ ಕೊಲೆ ಬೆದರಿಕೆಗಳು ಬಂದಿವೆ. ಇದರ ಹೊರತಾಗಿಯೂ ನಟ ಸಿನಿಮಾ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ.

Salman Khan
'ಈಗಾಗಲೇ ಹಲವು ಎದುರಿಸಿದ್ದೇವೆ': 'ಸಿಕಂದರ್' ಸುತ್ತ ವಿವಾದಗಳು ಬೇಡ ಎಂದ ಸಲ್ಮಾನ್ ಖಾನ್!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com