
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನನ್ನು ಮತ್ತೆ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆಗೆ ಹಾಜರಾಗಿದ್ದ ವೇಳೆ ರಜತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಜಾಮೀನು ಪಡೆದು ಷರತ್ತು ಉಲ್ಲಂಘಿಸಿದ್ದಕ್ಕೆ ರಜತ್‌ನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಿ ವಿಚಾರಣೆ ವೇಳೆ ಹಾಜರಾಗುವಂತೆ ಸೂಚಿಸಿ ನ್ಯಾಯಾಲಯ ಷರತ್ತು ವಿಧಿಸಿ ಜಾಮೀನು ನೀಡಿತ್ತು.
ಆದರೆ ರಜತ್ ಮಾತ್ರ ವಿಚಾರಣೆಗೆ ಗೈರಾಗಿದ್ದ. ಹೀಗಾಗಿ ನ್ಯಾಯಾಲಯ ರಜತ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಕೋರ್ಟ್ ನಿಂದ NBW ಜಾರಿಯಾದ ಹಿನ್ನೆಲೆಯಲ್ಲಿ ರಜತ್ ಮತ್ತೆ ಬಂಧನವಾಗಿದೆ.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಿದ್ದರು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು. ರಜತ್ ಬಂಧನದ ಬೆನ್ನಲ್ಲೇ ವಿನಯ್ ಗೌಡ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ.
Advertisement