
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ರಕ್ಷಕ್ ಬುಲೆಟ್ ಎಡವಟ್ಟಿನಿಂದ ಯುವಕನ ಕಾಲು ಮುರಿದಿದೆ. ಬೇಕಾಬಿಟ್ಟಿ ಥಾರ್ ಕಾರು ಚಲಾಯಿಸಿ ಬೈಕ್‌ಗೆ ಢಿಕ್ಕಿ ಹೊಡೆದಿದ್ದಾರೆ.
ಅಜಾಗರೂಕತೆಯಿಂದ ಜೀಪ್ ಚಲಾಯಿಸಿದ್ದರಿಂದ ಬೈಕ್‌ಗೆ ಕಾರು ಢಿಕ್ಕಿಯಾಗಿದೆ. ಗುರುವಾರ ಬೆಳಗ್ಗೆ 11.30 ಸುಮಾರಿಗೆ ಅಪಘಾತ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.
ವೇಣುಗೋಪಾಲ ಕಾಲು ಮುರಿದುಕೊಂಡ ಯುವಕ. ಯುವಕನ ಬೈಕ್ ಮತ್ತು ರಕ್ಷಕ್ ಕಾರು ಡಿಕ್ಕಿಯಾಗಿದೆ. ವೇಣುಗೋಪಾಲ ಮತ್ತು ಸ್ನೇಹಿತೆ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತವಾಗಿತ್ತು. ಮಾನ್ಯತಾ ಟೆಕ್‌ಪಾರ್ಕ್‌ನ ಶಿವರಾಜ್ ಕುಮಾರ್ ಮನೆ ತಿರುವಿನಲ್ಲಿ ಅಪಘಾತವಾಗಿದೆ. ಆಕ್ಸಿಡೆಂಟ್ ಆದ ನಂತರ ಟ್ಯಾಕ್ಸಿಯಲ್ಲಿ ಹೆಬ್ಬಾಳ ಬಳಿಯ ಖಾಸಗಿ ಆಸ್ಪತ್ರೆಗೆ ಯುವಕ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಗೆ ಯುವಕನ ಎಡಗಾಲಿನ ಮೂಳೆ ಮುರಿತವಾಗಿದೆ. ಶಿಡ್ಲಘಟ್ಟ ಮೂಲದ ಯುವಕ ವೇಣುಗೋಪಾಲ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಗಾಯಾಳು ಸ್ನೇಹಿತೆ ಅನುಷಾ ನೀಡಿದ ದೂರು ಆಧರಿಸಿ ನಟ ರಕ್ಷಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ.
Advertisement