'ಮತ್ತೆ ಮಳೆ ಹೊಯ್ಯುತ್ತಿದೆ' ಚಿತ್ರೀಕರಣ ಪೂರ್ಣ: ಅಕ್ಟೋಬರ್‌ನಲ್ಲಿ ಸಿನಿಮಾ ರಿಲೀಸ್

ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಫಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ.
A still from Matte Male Hoyyuttide movie
ಚಿತ್ರದ ಸ್ಟಿಲ್
Updated on

ಪ್ರೀತಿ, ನೆನಪು ಮತ್ತು ಎರಡನೇ ಅವಕಾಶಗಳ ವಿಷಯಗಳನ್ನು ಅನ್ವೇಷಿಸುವ ಮತ್ತೆ ಮಳೆ ಹೊಯ್ಯುತ್ತಿದೆ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರತಂಡ ತಂಡ ಇದೀಗ ಪೋಸ್ಟ್-ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಅಕ್ಟೋಬರ್ ನಲ್ಲಿ ಚಿತ್ರ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

ಶ್ರೀ ಗವಿರಂಗನಾಥಸ್ವಾಮಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಅವರು ತಮ್ಮ ಚೊಚ್ಚಲ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಗಂಗಾಧರ್ ಅವರು ಪತ್ನಿ ಸುಮ ಹೆಸರಿನಲ್ಲಿ ಸಿನಿಮಾಗೆ ಬಂಡವಾಳ ಹೂಡಿದ್ದು, ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಜೊತೆಗೆ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ. ಈ ಚಿತ್ರವು ಕನ್ನಡ ಬರಹಗಾರ ಕೆ ಸದಾಶಿವ ಅವರ ಸಣ್ಣ ಕಥೆಯನ್ನು ಆಧರಿಸಿದೆ.

ಅಮೆರಿಕದಲ್ಲಿ ನೆಲೆಸಿರುವ ದಿವಂಗತ ಲೇಖಕರ ಮಗಳ ಮೂಲಕ ಚಿತ್ರ ತಂಡವು ಹಕ್ಕುಗಳನ್ನು ಪಡೆದುಕೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ತಿಗೆ ದೇಣಿಗೆ ನೀಡುವ ಮೂಲಕ ಬರೆಗಾರ ಸದಾಶಿವ ಅವರಿಗೆ ಗೌರವವನ್ನು ನೀಡಲು ಮುಂದಾಗಿದೆ.

ಚಿತ್ರೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿತು.

A still from Matte Male Hoyyuttide movie
ರಜಿನಿಕಾಂತ್ ನಟನೆಯ 'ಕೂಲಿ' ಚಿತ್ರದ ಟ್ರೇಲರ್‌ನಲ್ಲಿ ನಟಿ ರಚಿತಾ ರಾಮ್; ತಮಿಳು ಚಿತ್ರರಂಗಕ್ಕೆ ಪದಾರ್ಪಣೆ

ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತು ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಸೇರಿದಂತೆ ಮತ್ತಿತರರು ಭಾಗಿಯಾಗುವ ಮೂಲಕ ಪ್ರತಿಭಾನ್ವಿತ ತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರಾಗಿ ನಟಿಸಿದ್ದು ನಾಯಕಿಯರಾಗಿ ಸುಲಕ್ಷಖೈರ, ಭೂಮಿಕಗೌಡ ನಟಿಸಿದ್ದಾರೆ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರವು 80ರ ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಫಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರಲಿವೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಚಿತ್ರವನ್ನು ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಎಲ್ಲರ ಸಹಕಾರದಿಂದ 24 ದಿನಗಳಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದ್ದೇವೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಅಕ್ಟೋಬರ್‌ದಲ್ಲಿ ತೆರೆಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದೆ.

ಚಿತ್ರಕ್ಕೆ ಶಾಂತ ರಾವ್ ಎಪ್ಪಲಿ ಛಾಯಾಗ್ರಹಣ ನೀಡಿದ್ದರೆ, ಸಂಕಲನದಲ್ಲಿ ಧನುಷ್ ವೀರ್, ನಿರ್ಮಾಣ ವಿನ್ಯಾಸವನ್ನು ಬಾಬು ಖಾನ್ ನಿರ್ವಹಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಕಬ್ಬಡಿ ನರೇಂದ್ರ ಬಾಬು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com