'ಕರಾವಳಿ'ಯಲ್ಲಿ ಮಾವೀರನಾಗಿ ರಾಜ್ ಬಿ ಶೆಟ್ಟಿ ಅಬ್ಬರ!

ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.
Raj B Shetty in a poster for Karavali (L) and Gurudatha Ganiga (R)
ರಾಜ್ ಬಿ ಶೆಟ್ಟಿ - ಗುರುದತ್ ಗಾಣಿಗ
Updated on

ಸದ್ಯ ಕರುಣಾಕರ ಗುರೂಜಿಯಾಗಿ ಅಭಿಮಾನಿಗಳ ಹೃದಯ ಗೆದ್ದಿರುವ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ಈಗ 'ಕರಾವಳಿ'ಯಲ್ಲಿ ಮಾವೀರನಾಗಿ ಅಬ್ಬರಿಸಲಿದ್ದಾರೆ... ಹೌದು, ರಾಜ್ ಬಿ ಶೆಟ್ಟಿ ಇದೀಗ ಮತ್ತೊಂದು ವಿಭಿನ್ನ ಪಾತ್ರದ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಅಂದಹಾಗೆ ಮಾವೀರನಾಗಿ ರಾಜ್ ಶೆಟ್ಟಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ 'ಕರಾವಳಿ' ಸಿನಿಮಾದಲ್ಲಿ.

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ರಾಜ್ ಎಂಟ್ರಿಯಿಂದ ಕರಾವಳಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಸದ್ಯ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ರಾಜ್ ಶೆಟ್ಟಿ ಲುಕ್ ಆಕರ್ಷಕಾಗಿದ್ದು ಯಾವ ಪಾತ್ರ ಎನ್ನುವ ಕುತೂಹಲ ಹೆಚ್ಚಾಗಿದೆ. ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ.

Raj B Shetty in a poster for Karavali (L) and Gurudatha Ganiga (R)
'ಸು ಫ್ರಮ್ ಸೋ' Movie Review: ಹಾಸ್ಯದೊಂದಿಗೆ ತುಸು ಹಾರರ್‌ ಮಿಶ್ರಣ; ಕರಾವಳಿ ಸೊಬಗಿನ ರಸದೌತಣ- ಮನರಂಜನೆಯ ಹೂರಣ- ಮಿಕ್ಕಿದ್ದೆಲ್ಲಾ ಗೌಣ!

ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಹಾವೀರನ ಎನ್ನುವುದು ಕುತೂಹಲ ಮೂಡಿಸಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಲುಕ್ ರಿಲೀಸ್ ಮಾಡುವ ಮೂಲಕ ಕರಾವಳಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈಗಾಗಲೇ ಕರಾವಳಿ ಸಿನಿಮಾದಿಂದ ರಿಲೀಸ್ ಆಗಿರುವ ಪೋಸ್ಟರ್ ಮತ್ತು ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ರಾಜ್ ಶೆಟ್ಟಿ ಪೋಸ್ಟರ್ ಮತ್ತಷ್ಟು ಆಕರ್ಷಕವಾಗಿದ್ದು ಸಿನಿಮಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕರಾವಳಿಯಲ್ಲಿ ನಟ ಮಿತ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ರಮೇಶ್ ಇಂದಿರ ಅವರ ಪಾತ್ರ ಕೂಡ ಸಿಕ್ಕಾಪಟ್ಟೆ ಪವರ್‌ಫುಲ್ ಆಗಿದೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ ಹೆಸರೇ ಹೇಳುವ ಹಾಗೆ ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ. ಈ ಸಿನಿಮಾ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com