ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರ ಬಿಡುಗಡೆ ದಿನಾಂಕ ಘೋಷಣೆ

ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ 'ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡದ ಹುಡುಗ ಹರೀಶ್ ಆಗಿ ನಟಿಸುತ್ತಿದ್ದಾರೆ.
A still from movie
ಏಳುಮಲೆ ಚಿತ್ರದ ಸ್ಟಿಲ್
Updated on

ಹಾಡು, ಟೈಟಲ್ ಹಾಗೂ ಟೀಸರ್ ಮೂಲಕ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿರುವ ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿರುವ ಏಳುಮಲೆ ಸಿನಿಮಾ ಸೆಪ್ಟೆಂಬರ್ 5ರಂದು ತೆರೆಗೆ ಬರುತ್ತಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಚಿತ್ರ ತಂಡ ಟೀಸರ್'ನ್ನು ಬಿಡುಗಡೆ ಮಾಡಿದ್ದು, ಎರಡು ಹಾಡುಗಳನ್ನೂ ಬಿಡುಗಡೆ ಮಾಡಿದೆ. ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ `ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡದ ಹುಡುಗ ಹರೀಶ್ ಆಗಿ ನಟಿಸುತ್ತಿದ್ದಾರೆ.

ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

A still from movie
'ಏಳುಮಲೆ' ಚಿತ್ರದ ಎರಡನೇ ಹಾಡು ಬಿಡುಗಡೆ; ತರುಣ್ ಕಿಶೋರ್ ಸುಧೀರ್‌ಗೆ ಕೃತಜ್ಞತೆ ಸಲ್ಲಿಸಿದ ಗಾಯಕಿ ಮಂಗ್ಲಿ

ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿರಲಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಡಿ.ಇಮ್ಮನ್ ಸಂಗೀತ, ಅದ್ವೈತ್‌ ಗುರುಮೂರ್ತಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ನಾಗಾರ್ಜುನ್‌ ಶರ್ಮಾ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com